ಕೋರ್ಟ್ ಆದೇಶ ಉಲ್ಲಂಘಿಸಿ ಹಿಜಾಬ್ ಧರಿಸಿ ಕಾಲೇಜಿಗೆ ಹಾಜರಾದ ವಿದ್ಯಾರ್ಥಿನಿಯರು Saaksha Tv
ತುಮಕೂರು: ಬುರ್ಖಾ ಧರಿಸಿ ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗುತ್ತಾ ವಿದ್ಯಾರ್ಥಿನಿಯರು ಕಾಲೇಜಿಗೆ ಆಗಮಿಸಿರುವ ಘಟನೆ ತುಮಕೂರು ನಗರದಲ್ಲಿ ನಡೆದಿದೆ.
ಇಂದು ರಾಜ್ಯಾದ್ಯಂತ ಪಿಯು, ಪದವಿ ಕಾಲೇಜುಗಳು ಪ್ರಾರಂಭವಾಗಿದ್ದು. ತುಮಕೂರು ನಗರದ ಎಂಪ್ರೆಸ್ ಕಾಲೇಜಿಗೆ ವಿದ್ಯಾರ್ಥನಿಯರು ಹೈಕೋರ್ಟ್ ನೀಡಿದ ಆದೇಶವನ್ನು ಉಲ್ಲಂಘಿಸಿ ಹಿಜಾಬ್ ಧರಿಸಿ ಕಾಲೇಜಿಗೆ ಹಾಜರಾಗಿದ್ದಾರೆ.
ಇನ್ನೂ ಕಾಲೇಜಿನಲ್ಲಿ ಬುರ್ಖಾ ತೆಗೆದಿಡಲು ಪ್ರತ್ಯೇಕ ಕೊಠಡಿ ಮೀಸಲಿಡಲಾಗಿದ್ದು, ಕೆಲ ವಿದ್ಯಾರ್ಥಿನಿಯರು ಬುರ್ಖಾ, ಹಿಜಾಬ್ ತೆಗೆದ ತರಗತಿಗೆ ಹಾಜರಾಗಿದ್ದರು. ಆದರೆ ಇನ್ನೂ ಕೆಲವರು ವಿದ್ಯಾರ್ಥಿನಿಯರು ನಿಗದಿತಪಡಿಸಿದ ಕೊಠಡಿಯಲ್ಲಿ ಬುರ್ಖಾ, ಹಿಜಾಬ್ ತೆಗೆಯದೇ ಪಟ್ಟು ಹಿಡಿದಿದ್ದರು. ಈ ವೇಳೆ ಕಾಲೇಜಿನ ಸಿಬ್ಬಂದಿ, ಪ್ರಾಂಶುಪಾಲರು ಬುರ್ಖಾ ತೆಗೆಯುವಂತೆ ಮನವಿ ಮಾಡಿದರು. ಹೀಗಿದ್ದರೂ ಹಿಜಾಬ್ ತೆಗೆಯಲು ವಿದ್ಯಾರ್ಥಿಗಳ ಹಿಂದೇಟು ಹಾಕಿದರು.
ನಮಗೆ ಶಿಕ್ಷಣ ಧರ್ಮ ಎರಡೂ ಮುಖ್ಯ. ಕೋರ್ಟ್ಗಿಂತ ನಮಗೆ ಧರ್ಮ ಮುಖ್ಯ ಎಂದಿದ್ದಾರೆ. ಹಿಜಾಬ್ ಹಾಗೂ ಬುರ್ಖಾ ಧರಿಸಿ ತರಗತಿಗೆ ಹೋಗಲು ಅವಕಾಶ ಕೊಡದ ಹಿನ್ನೆಲೆ ಅಲ್ಲಾ ಹೂ ಅಕ್ಬರ್ ಎಂದು ಘೋಷಣೆ ಕೂಗುತ್ತಾ ಮನೆಗೆ ವಾಪಸ್ ಹೋದರು.