ವಿದ್ಯಾರ್ಥಿಗಳೇ ಗಮನಿಸಿ : ಜು.26 ರಿಂದ ಪದವಿ ಕಾಲೇಜುಗಳು ಓಪನ್ Colleges
ಬೆಂಗಳೂರು : ರಾಜ್ಯದಲ್ಲಿ ಪದವಿ ಕಾಲೇಜುಗಳನ್ನು ತೆರೆಯಲು ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ.
ಮುಖ್ಯಮಂತ್ರಿಗಳು ತಮ್ಮ ನಿವಾಸದಲ್ಲಿ ಸಚಿವರು ಹಾಗು ಅಧಿಕಾರಿಗಳ ಜೊತೆ ಕೋವಿಡ್ -19 ರ ಕುರಿತು ಚರ್ಚೆ ನಡೆಸಿದರು.
ಈ ಸಭೆಯಲ್ಲಿ ರಾಜ್ಯದಲ್ಲಿ ಜುಲೈ.26ರಿಂದ ಪದವಿ ತರಗತಿಗಳನ್ನು ತೆರೆಯೋದಕ್ಕೂ ಅವಕಾಶ ನೀಡಲಾಗಿದೆ.
ಆದ್ರೆ ಕಾಲೇಜು ತರಗತಿಗಳಿಗೆ ಹಾಜರಾಗುವಂತ ವಿದ್ಯಾರ್ಥಿಗಳಿಗೆ, ಉಪನ್ಯಾಸಕರಿಗೆ ಹಾಗೂ ಸಿಬ್ಬಂದಿಗಳಿಗೆ ಕೊರೋನಾ ಲಸಿಕೆ ಪಡೆಯೋದು ಕಡ್ಡಾಯವಾಗಿರುತ್ತದೆ. ವಿದ್ಯಾರ್ಥಿಗಳು ಕನಿಷ್ಠ ಮೊದಲ ಕೊರೊನಾ ಲಸಿಕೆಯನ್ನು ಕಡ್ಡಾಯ ಪಡೆದಿರಬೇಕಾಗಿದೆ.
ಇದಲ್ಲದೆ ನಾಳೆಯಿಂದ ಶೇಕಡಾ 50 ರಷ್ಟು ಭರ್ತಿಗೆ ಅವಕಾಶ ನೀಡುತ್ತಾ ರಾಜ್ಯದಲ್ಲಿ ಸಿನಿಮಾ ಮಂದಿರಗಳನ್ನು ತೆರೆಯೋದಕ್ಕೆ ಇಂದಿನ ಸಿಎಂ ಯಡಿಯೂರಪ್ಪ ನೇತೃತ್ವದ ಸಭೆಯಲ್ಲಿ ನಿರ್ಧಾರ ಕೈಗೊಂಡಿದೆ ಎನ್ನಲಾಗಿದೆ.









