PSI ಮರು ಪರೀಕ್ಷೆ ನಿರ್ಧಾರ ವಿರೋಧಿಸಿ ಅಭ್ಯರ್ಥಿಗಳಿಂದ ಪ್ರತಿಭಟನೆ….
PSI ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಮತ್ತೊಮ್ಮೆ ಪರೀಕ್ಷೆಯನ್ನ ಮಾಡಲು ಸರ್ಕಾರ ನಿರ್ಧರಿಸಿದೆ. ಈ ಹಿನ್ನೆಲೆ ಪಿಎಸ್ಐ ಪರೀಕ್ಷೆಯಲ್ಲಿ ಸೆಲೆಕ್ಟ್ ಆಗಿದ್ದ ಅಭ್ಯರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ನಗರದ ಹಲವೆಡೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಈ ಕುರಿತು ಆಕ್ರೋಶ ವ್ಯಕ್ತಪಡಿಸುರಿವು ಪಿ ಎಸ್ ಐ ಆಕಾಂಕ್ಷಿಗಳು , ‘ಕಾನೂನು ಪ್ರಕಾರ ನೂರು ಜನಕ್ಕೆ ಶಿಕ್ಷೆ ಆಗದಿದ್ದರೂ, ಒಬ್ಬ ನಿರಪರಾಧಿಗೆ ಶಿಕ್ಷೆ ಆಗಬಾದರು’ ಎನ್ನುತ್ತದೆ. ಆದರೆ, ಇಲ್ಲಿ ಬಹುತೇಕ ನಿರಪರಾಧಿಗಳಿಗೆ ಶಿಕ್ಷೆ ಆಗುತ್ತಿದೆ. ಈ ರೀತಿಯ ಸರ್ಕಾರದ ನೀತಿ ಸರಿ ಅಲ್ಲ. ಇದರಿಂದ ಪ್ರಾಮಾಣಿಕವಾಗಿ ಬರೆದವರಿಗೂ ಅನ್ಯಾಯವಾಗುತ್ತದೆ. ಅದರೊಂದಿಗೆ ನಮ್ಮಲ್ಲಿ ಅನೇಕರು ವಯೋಮಿತಿ ಗಡಿಯಲ್ಲಿ ಇದ್ದಾರೆ. ಅವರ ಕನಸು ಮತ್ತು ಪರಿಶ್ರಮ ಎರಡೂ ವ್ಯರ್ಥವಾಗುತ್ತದೆ ಎಂದರು.
ಹಲವು ಜಿಲ್ಲೆಗಳಿಂದ ನಗರದ ಫ್ರೀಡಂ ಪಾರ್ಕ್ ಆಗಮಿಸುರುವ ವಿದ್ಯಾರ್ಥಿಗಳು ಧರಣಿ ಕುಳಿತಿದ್ದಾರೆ. ಯಾರು ಅಕ್ರಮ ಮಾಡಿದ್ದಾರೋ ಅವರನ್ನ ಅರೆಸ್ಟ್ ಮಾಡಿ ಪ್ರಾಮಾಣಿಕರಿಗೆ ಆರ್ಡರ್ ಕಾಪಿ ಕೊಡಿ ಎಂದು ಆಗ್ರಹಿಸಿದ್ದಾರೆ. ಮರು ಪರೀಕ್ಷೆಗೆ ನಿರ್ಧಾರವನ್ನ ರದ್ದು ಮಾಡುವವರೆಗೂ ಉಪವಾಸ ಸತ್ಯಾಗ್ರಹ ಕುಳಿತುಕೊಳ್ಳುವುದಾಗಿ ತಿಳಿಸಿದ್ದಾರೆ.