ವಿದ್ಯಾರ್ಥಿಗಳು ಪರೀಕ್ಷೆ ಭಯ ಬಿಡಬೇಕು : ಸಿಎಂ ಬೊಮ್ಮಾಯಿ ಸಲಹೆ
ಹುಬ್ಬಳ್ಳಿ : ಮಾರ್ಚ್ 28 ರಿಂದ SSLC ಪರೀಕ್ಷೆ ಪ್ರಾರಂಭವಾಗಲಿದ್ದು, ಸರಕಾರ ಸಕಲ ತಯಾರಿಯನ್ನು ಮಾಡಿಕೊಂಡಿದೆ. ವಿದ್ಯಾರ್ಥಿಗಳು ಭಯ ಪಡದೆ ಪರೀಕ್ಷೆ ಬರಯಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು , ನಾಳೆಯಿಂದ SSLC ಪರೀಕ್ಷೆ ಆರಂಭವಾಗಲಿದ್ದು, ಪರೀಕ್ಷೆಗೆ ಸರ್ಕಾರ ತಯಾರಿ ಮಾಡಿಕೊಂಡಿದೆ. ಸರಳವಾಗಿ ಪರೀಕ್ಷೆಯನ್ನ ನಡೆಸುತ್ತಿದ್ದೇವೆ. ವಿದ್ಯಾರ್ಥಿಗಳು ಮುಕ್ತವಾಗಿ ಪರೀಕ್ಷೆ ಬರೆಯಲಿ. ವಿದ್ಯಾರ್ಥಿಗಳು ಭಯ ಇಲ್ಲದೆ ಪರೀಕ್ಷೆ ಬರೆಯಬೇಕು. ಅಲ್ಲದೇ ಹಿಜಾಬ್ ಬಗ್ಗೆ ಹೈಕೋರ್ಟ್ ಆದೇಶ ಬಂದಿದೆ. ತೀರ್ಪು ಬಂದ ಮೇಲೆ ಅನವಶ್ಯಕ ಹೇಳಿಕೆ ನೀಡಬಾರದು ಎಂದು ಹೇಳಿದರು.
ಈ ಬಾರಿ ಈ ಬಾರಿ ಒಟ್ಟು 8,73,846 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, 45,289 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಇದರಲ್ಲಿ 4,52,732 ವಿದ್ಯಾರ್ಥಿಗಳು, 4,21,110 ವಿದ್ಯಾರ್ಥಿನಿಯರು ನಾಲ್ವರು ತೃತೀಯ ಲಿಂಗಿಗಳು ಈ ಬಾರಿ ಪರೀಕ್ಷೆ ಬರೆಯುತ್ತಿದ್ದಾರೆ.
ಅಂತರಾಜ್ಯ ಜಲ ವಿವಾದದ ಕುರಿತು ಮಾತನಾಡಿದ ಅವರು ಇದನ್ನು ಬಗೆ ಹರಿಸೋಕೆ ಎಲ್ಲ ರೀತಿಯ ಪ್ರಯತ್ನ ಮಾಡಲಾಗುತ್ತಿದ್ದು, ಮೊದಲು ನಾನು ದೆಹಲಿಗೆ ಹೋಗಿ ಮಾತುಕತೆ ಮಾಡುತ್ತೇನೆ. ನಂತರ ಅಗತ್ಯ ಬಿದ್ದಲ್ಲಿ ಸರ್ವಪಕ್ಷದ ನಿಯೋಗ ಕರೆದುಕೊಂಡು ಹೋಗುತ್ತೇವೆ ಎಂದು ಹೇಳಿದರು.
ಇನ್ನೂ 30 ರಂದು ಬಜೆಟ್ ಅಧಿವೇಶನ ಮುಗಿಯುತ್ತೆ. ಎಲ್ಲವೂ ಅನುಷ್ಠಾನಕ್ಕೆ ಬರುವಂತೆ ಸೂಚನೆ ನೀಡಿದ್ದೇನೆ. ಅಂತರಾಜ್ಯ ಜಲ ವಿವಾದ ಶೀಘ್ರದಲ್ಲೇ ಬಗೆಹರಿಯುತ್ತದೆ, ಕಾನೂನಾತ್ಮಕ ರೀತಿಯಲ್ಲಿ ಕೆಲವು ನ್ಯಾಯಾಲಯಗಳಿಂದ ನಮಗೆ ಪರಿಹಾರ ಪಡೆಯಬೇಕಿದೆ. ಕೇಂದ್ರದಿಂದ ಸಹ ಹಲವು ಅನುಮತಿ ಗೆ ಸಿದ್ಧತೆ ಮಾಡಿಕೊಳ್ಳಲು ಹೇಳಿದ್ದೇನೆ ಎಂದಿದ್ಧಾರೆ.