SSLC Exam: ಹಿಜಾಬ್ ತೆಗೆದು ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿನಿಯರು

1 min read
Haveri Saaksha Tv

ಹಿಜಾಬ್ ತೆಗೆದು ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿನಿಯರು

ಹಾವೇರಿ: ಇಂದಿನಿಂದ ರಾಜ್ಯಾದ್ಯಂತ SSLC ಪರೀಕ್ಷೆ ಪ್ರಾರಂಭವಾಗಿದ್ದು, ಮುಸ್ಲಿಂ ವಿದ್ಯಾರ್ಥಿನಿಯರು ಪರೀಕ್ಷಾ ಕೊಠಡಿ ಒಳಗಡೆ ಹಿಜಾಬ್ ತೆಗೆದು ಪ್ರವೇಶಿಸಿ ಪರೀಕ್ಷೆ ಬರೆಯುತ್ತಿದ್ದಾರೆ.

ಹಾವೇರಿ ನಗರದ ಮುನ್ಸಿಪಲ್ ಹೈಸ್ಕೂಲ್ ಮೈದಾನದ ಪರೀಕ್ಷಾ ಹಾಗೂ ಹೊಸಮಠ ಸೇರಿದಂತೆ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಹಿಜಾಬ್ ತೆಗೆದು ವಿದ್ಯಾರ್ಥಿನಿಯರು ಪರೀಕ್ಷಾ ಕೇಂದ್ರಕ್ಕೆ ಹೋದರು. ಜಿಲ್ಲೆಯಲ್ಲಿ ಒಟ್ಟು 100 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, 428 ಶಾಲೆಗಳ ಒಟ್ಟು 24,871 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.

ಪರೀಕ್ಷಾ ಕೇಂದ್ರದ ಬಳಿ ಪೊಲೀಸ್ ಬಿಗಿಭದ್ರತೆಯನ್ನು ನಿಯೋಜನೆ ಮಾಡಲಾಗಿದೆ. ಜಿಲ್ಲೆಯಲ್ಲಿ ಶಾಂತಿಯುತವಾಗಿ ಕನ್ನಡ ಪರೀಕ್ಷೆ ಪ್ರಾರಂಭಗೊಂಡಿವೆ. ಪರೀಕ್ಷಾ ಕೇಂದ್ರಕ್ಕೆ ಹಾವೇರಿ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.ಪಾಟೀಲ ಸೇರಿದಂತೆ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೋಷಕರು ತಮ್ಮ ಮಕ್ಕಳನ್ನ ಪರೀಕ್ಷಾ ಕೇಂದ್ರಕ್ಕೆ ಕರೆದುಕೊಂಡು ಬಂದು ಶುಭಹಾರೈಸಿ ಪರೀಕ್ಷೆ ಕಳಿಸಿದರು.

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd