ಕೊಪ್ಪಳ: ಕಾಲೇಜು ವಿದ್ಯಾರ್ಥಿಗಲು ರ್ಯಾಗಿಂಗ್ ಮಾಡುವ ಸುದ್ದಿ ಕೇಳಿರುತ್ತೇವೆ. ಆದರೆ, ಇಲ್ಲೊಂದು ಪ್ರಕರಣದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ತಮ್ಮ ಕೆಳ ವರ್ಗದ ವಿದ್ಯಾರ್ಥಿಗೆ ರ್ಯಾಗಿಂಗ್ ಮಾಡಿ ವಿಕೃತಿ ಮೆರೆದಿರುವ ಘಟನೆ ನಡೆದಿದೆ.
ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಯ ಗುದದ್ವಾರದಲ್ಲಿ ಪೆನ್ಸಿಲ್ ಇಟ್ಟು ವಿಕೃತಿ ಮೆರದಿದ್ದಾರೆ. ಬಟ್ಟೆ ತೊಳೆಯುವುದು ಸೇರಿದಂತೆ ಅನೇಕ ಕೆಲಸಗಳನ್ನು ಮಾಡಿಸಿದ್ದಾರೆ. ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾರೆ. ಹೀಗಾಗಿ ಕಿರಿಯ ವಿದ್ಯಾರ್ಥಿಗಳು ಭಯದಿಂದಲೇ ಶಾಲೆಗೆ ಬರುವಂತಾಗಿದೆ ಎನ್ನಲಾಗಿದೆ.
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೇಮಗುಡ್ಡದಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿಯೇ ಈ ಆರೋಪ ಕೇಳಿ ಬಂದಿದೆ. ಈ ವಸತಿ ಶಾಲೆಯಲ್ಲಿ 246 ವಿದ್ಯಾರ್ಥಿಗಳಿದ್ದಾರೆ. ಇಲ್ಲಿ ಎಸ್ಸೆಸ್ಸೆಲ್ಸಿ ಓದುತ್ತಿರುವ ಐದಾರು ವಿದ್ಯಾರ್ಥಿಗಳು, 6,7,8, 9 ನೇ ತರಗತಿಯಲ್ಲಿ ಓದುತ್ತಿರುವ ಇಪ್ಪತ್ತಕ್ಕೂ ಅಧಿಕ ವಿದ್ಯಾರ್ಥಿಗಲು ರ್ಯಾಗಿಂಗ್ ಮಾಡಿದ್ದಾರೆ ಎನ್ನಲಾಗಿದೆ.
ಕೋಣೆ ಸ್ವಚ್ಚಗೊಳಿಸಿಕೊಳ್ಳುವುದು, ಬಟ್ಟೆ ಸ್ವಚ್ಛಗೊಳಿಸಿಕೊಳ್ಳುವುದು. ಶಾಲೆಯ ಪ್ರಾಜೆಕ್ಟ್ ಗಳನ್ನು ಕೂಡಾ ಜ್ಯೂನಿಯರ್ ವಿದ್ಯಾರ್ಥಿಗಳಿಂದಲೇ ಮಾಡಿಸಿದ್ದಾರೆ. ಟೆರೆಸ್ ಮೇಲೆ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗಿ ಪೊರಕೆಯಿಂದ ಹೊಡೆದಿದ್ದಾರೆ. ಗುದದ್ವಾರದಲ್ಲಿ ಪೆನ್ಸಿಲ್ ಇಟ್ಟು ವಿಕೃತಿ ಮೆರೆದಿದ್ದಾರೆ. ಸದ್ಯ ವಿದ್ಯಾರ್ಥಿಗಳು ಈ ಕುರಿತು ತಮ್ಮ ಪೋಷಕರಿಗೆ ಮಾಹಿತಿ ನೀಡಿದ್ದು, ಸದ್ಯ ಅಂತಹ ವಿದ್ಯಾರ್ಥಿಗಳ ಮೇಲೆ ಕ್ರಮ ಕೈಗೊಳ್ಳುವುದಾಗಿ ಶಾಲೆಯ ಪ್ರಾಚಾರ್ಯ ವಿನಯಕುಮಾರ್ ಹೇಳಿದ್ದಾರೆ.