ಬೆಂಗಳೂರು, ಜೂನ್ 4: ಪದವಿ ಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಮುಖ್ಯವಾದ ಮಾಹಿತಿಯೊಂದನ್ನು ನೀಡಿದೆ. ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆಯು ಜೂನ್ 18 ರಂದು ನಡೆಯಲಿದ್ದು, ಇದಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಮತ್ತು ಅವರ ಪರೀಕ್ಷಾ ಕೇಂದ್ರದ ವಿವರವುಳ್ಳ ತಾತ್ಕಾಲಿಕ ಪಟ್ಟಿ ಬಿಡುಗಡೆಯಾಗಿದೆ.
ಪದವಿ ಪೂರ್ವ ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳಿಗೆ ತಾವು ಇರುವ ಜಿಲ್ಲೆಯಲ್ಲೇ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ್ದು, ಇದೀಗ ವಿದ್ಯಾರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಿದೆ.
ವಿದ್ಯಾರ್ಥಿಗಳ ತಾತ್ಕಾಲಿಕ ಪಟ್ಟಿಗೆ ಸಂಬಂಧಿಸಿದಂತೆ ತಿದ್ದುಪಡಿಗೆ ಕಾಲೇಜುಗಳ ಪ್ರಾಚಾರ್ಯರ ಮೂಲಕ ಜೂನ್ 5 ರವರೆಗೆ ಅವಕಾಶ ಕಲ್ಪಿಸಲಾಗಿದ್ದು, ಜೂನ್ 7 ರಂದು ಅಂತಿಮ ಪಟ್ಟಿ ಪ್ರಕಟಿಸಲಾಗುತ್ತದೆ.
ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳು www.pue.kar.nic.in ವೆಬ್ ಸೈಟ್ ನಲ್ಲಿ ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಂಡು ನೇರವಾಗಿ ಪರೀಕ್ಷಾ ಕೇಂದ್ರಕ್ಕೆ ಹೋಗಬಹುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯು ತಿಳಿಸಿದೆ.
ರಾಜ್ಯದ ಎಲ್ಲ ದೇವಾಲಯಗಳ ಪ್ರಸಾದ ಪರೀಕ್ಷೆಗೆ ತೀರ್ಮಾನ; ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ತಿರುಪತಿ ಲಡ್ಡು (Tirupathi Laddu) ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಇರುವ ಅಂಶ ಬೆಳಕಿಗೆ ಬರುತ್ತಿದ್ದಂತೆ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಹೀಗಾಗಿ ರಾಜ್ಯದ ಎಲ್ಲ ದೇವಾಲಯಗಳ ಪ್ರಸಾದ...