ಲಕ್ನೋ: ವಿದ್ಯಾರ್ಥಿಗಳು ಶಾಲೆಯಲ್ಲಿ ನಮಾಜ್ ಮಾಡಿದ್ದು, ಶಾಲೆಯ ಪ್ರಾಂಶುಪಾಲರನ್ನು ಅಮಾನತು ಮಾಡಲಾಗಿದೆ.
ಈ ಘಟನೆ ಉತ್ತರ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ವಿದ್ಯಾರ್ಥಿಗಳು ನಮಾಜ್ ಮಾಡುತ್ತಿದ್ದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಹೀಗಾಗಿ ಅಧಿಕಾರಿಗಳು ಉತ್ತರ ಪ್ರದೇಶದಲ್ಲಿನ ಠಾಕೂರ್ ಗಂಜ್ ಪ್ರದೇಶದ ಶಾಲೆಯೊಂದರ ಪ್ರಾಂಶುಪಾಲರನ್ನು ಅಮಾನತು ಮಾಡಲಾಗಿದೆ.
ಈ ಕಾರ್ಯಕ್ಕೆ ಕೆಲವು ಹಿಂದೂ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯ ನಂತರ ಈ ಘಟನೆ ಬೆಳಕಿಗೆ ಬಂದಿತ್ತು. ಆ ನಂತರ ವಿಷಯದ ಕುರಿತು ತನಿಖೆಗೆ ಆದೇಶ ಹೊರಡಿಸಲಾಗಿತ್ತು.
ತನಿಖೆಯಂತೆ ಉತ್ತರ ಪ್ರದೇಶ ಸರ್ಕಾರಿ ಸೇವಕ (ಶಿಸ್ತು ಮತ್ತು ಮೇಲ್ಮನವಿ) ನಿಯಮಗಳು-1999 ರ ಅಡಿಯಲ್ಲಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಶಾಲಾ ಪ್ರಾಂಶುಪಾಲರನ್ನು ಅಮಾನತು ಮಾಡಲಾಗಿದೆ.