ಪೆಗಾಸಸ್ ಗೂಢಚರ್ಯೆ ಪ್ರಕರಣ : ಮೋದಿಗೆ ತಿವಿದ ಸುಬ್ರಮಣಿಯನ್

1 min read

ಪೆಗಾಸಸ್ ಗೂಢಚರ್ಯೆ ಪ್ರಕರಣ : ಮೋದಿಗೆ ತಿವಿದ ಸುಬ್ರಮಣಿಯನ್

ಬೆಂಗಳೂರು : ದೇಶದಲ್ಲಿ ಹೆಚ್ಚು ಚರ್ಚೆ ಕಾರಣವಾಗಿರುವ ಪೆಗಾಸಸ್ ಗೂಢಚರ್ಯೆ ಪ್ರಕರಣ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೇಲ್ ಪ್ರಧಾನಿಗೆ ಪತ್ರ ಬರೆದು ಸತ್ಯ ತಿಳಿಸುವಂತೆ ಹೇಳಲಿ ಎಂದು ಬಿಜೆಪಿ ಹಿರಿಯ ಮುಖಂಡ ಹಾಗೂ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಆಗ್ರಹಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸುಬ್ರಮಣಿಯನ್ ಸ್ವಾಮಿ, ‘ನಾವು ಮುಚ್ಚಿಡುವಂಥದ್ದು ಏನೂ ಇಲ್ಲದಿದ್ದರೆ, ಪ್ರಧಾನಿ ಮೋದಿ ಅವರು ಇಸ್ರೇಲ್ ಪ್ರಧಾನಿಗೆ ಪತ್ರ ಬರೆದು ಎನ್‍ಎಸ್‍ಒನ ಪೆಗಾಸಸ್ ಪ್ರಾಜೆಕ್ಟ್ ಬಗ್ಗೆ ಸತ್ಯವನ್ನು ತಿಳಿಸುವಂತೆ ಹೇಳಲಿ. ಹಾಗೇ ಅದಕ್ಕೆ ಯಾರು ಪಾವತಿಸಿದ್ದಾರೆ ಎಂಬುದನ್ನೂ ಬಹಿರಂಗ ಪಡಿಸಲಿ’ ಎಂದು ಒತ್ತಾಯಿಸಿದ್ದಾರೆ.

Subramanian saakshatv

ಇತ್ತ ಹೆಚ್ ಡಿ ಕುಮಾರಸ್ವಾಮಿ ಕೂಡ ಟ್ವೀಟ್ ಮಾಡಿ ಪೆಗಾಸಸ್ ಬೇಹುಗಾರಿಕೆ ಪ್ರಕರಣದಲ್ಲಿ ಕೇಂದ್ರ ಸರ್ಕಾರ ಸಿಲುಕಿಕೊಂಡಿದೆ. ಇದು ಮಾನವ ಹಕ್ಕು ಉಲ್ಲಂಘನೆಯಂತಹ ಪ್ರಕರಣವಾದರೂ ಇತ್ತೀಚೆಗೆ ಕೇಂದ್ರ ಆದ್ಯತೆ ಮೇಲೆ ಗೂಢಚರ್ಯೆ ನಡೆಸುತ್ತಿರುವುದು ಹೊಸದೇನಲ್ಲ. ಕೇಂದ್ರದಲ್ಲಿ ಅಧಿಕಾರ ಉಳಿಸಿಕೊಳ್ಳಲು, ರಾಜ್ಯಗಳಲ್ಲಿ ಸರ್ಕಾರ ಕೆಡವಿ, ಸರ್ಕಾರವನ್ನು ತರಲು ಬಿಜೆಪಿ ಪ್ರಯೋಗಿಸಿರುವ ಅಸ್ತ್ರಗಳಲ್ಲಿ ಇದೂ ಒಂದು ಎಂದು ಆರೋಪಿಸಿದ್ದಾರೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd