ಕೋಲಾರ : ಕಾರಣವಿಲ್ಲದೇ ಸುಮ್ಮನೆ ಕ್ವಾರಂಟೈನ್ ನಲ್ಲಿಟ್ಟಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಒಡ್ಡಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಸಂತೇಹಳ್ಳಿ ಗ್ರಾಮದಲ್ಲಿ ನಡೆದಿದೆ.
ಇಂದು ಪೆಟ್ರೋಲ್ ತುಂಬಿದ ಬಾಟಲಿಯೊಂದಿಗೆ ಗ್ರಾಮ ಪಂಚಾಯತಿ ಕಚೇರಿ ಪ್ರವೇಶಿಸಿದ ವ್ಯಕ್ತಿ, ಒಳಗಿನಿಂದ ಬೀಗ ಜಡಿದು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಬೆದರಿಕೆ ಹಾಕಿದ್ದಾರೆ. ಜೊತೆಗೆ ತನ್ನ ಫೋಟೊವನ್ನು ಕೊರೊನಾ ಸೋಂಕಿತ ಎಂಬಂತೆ ಬಿಂಬಿಸಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ. ಅಲ್ಲದೆ ತನ್ನನ್ನು ಎರಡು ದಿನದಿಂದ ಹೋಂ ಕ್ವಾರಂಟೈನ್ ನಲ್ಲಿ ಇಟ್ಟಿದ್ದಾರೆ ಎಂದು ಗ್ರಾಮ ಪಂಚಾಯತಿ ಪಿಡಿಓ ಹಾಗೂ ಸದಸ್ಯ ಲಕ್ಷ್ಮೀನಾರಾಯಣ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನು ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರು ಮನನೊಂದ ವ್ಯಕ್ತಿಗೆ ಮನವೊಲಿಸುವ ಕಾರ್ಯ ನಡೆಸಿದ್ದಾರೆ.