ತುಮಕೂರು: ಮಾಜಿ ಪ್ರಧಾನಿ ದೇವೇಗೌಡ ಅವರಿದ್ದ ಕಾರ್ಯಕ್ರಮದ ವೇದಿಕೆಗೆ ನುಗ್ಗಿ ಕಾಂಗ್ರೆಸ್ ನ ಕಾರ್ಯಕರ್ತೆಯರು ಹೈಡ್ರಾಮಾ ಸೃಷ್ಟಿಸಿದ್ದಾರೆ.
ತುಮಕೂರಿನ ಕುಂಚಿಟಿಗರ ಸಭಾಭವನದಲ್ಲಿ ಮೈತ್ರಿ ಸಮಾವೇಶ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಕಾರ್ಯಕರ್ತೆಯರ ಸೋಗಿನಲ್ಲಿ ಇಬ್ಬರು ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ನುಗ್ಗಿ, ಕುಮಾರಸ್ವಾಮಿ ಅವರು ಗ್ಯಾರಂಟಿಯಿಂದ ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ ಎಂದು ಘೋಷಣೆ ಕೂಗಿದ್ದಾರೆ.
ಈ ಸಂದರ್ಭದಲ್ಲಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಈ ವೇಳೆ ಕುಮಾರಸ್ವಾಮಿ ಹಾಗೂ ದೇವೇಗೌಡರ ವಿರುದ್ಧ ಘೋಷಣೆ ಕೂಗಿದರು. ನಂತರ ಪೊಲೀಸರು ಮಧ್ಯೆ ಪ್ರವೇಶಿಸಿ ಕಾರ್ಯಕರ್ತೆಯರನ್ನು ವಶಕ್ಕೆ ಪಡೆದಿದ್ದಾರೆ.