ಬೆಂಗಳೂರು: ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ವಿಪಕ್ಷಗಳು ಆಗ್ರಹಿಸುತ್ತಿವೆ. ಈ ಬೆನ್ನಲ್ಲೇ ಸ್ವ ಪಕ್ಷದಲ್ಲಿ ಸಿಎಂ ಸ್ಥಾನಕ್ಕಾಗಿ ಪೈಪೋಟಿ ನಡೆದಿದೆ. ಇದರ ಬೆನ್ನಲ್ಲೇ ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಸಿಎಂ ಸಿದ್ದರಾಮಯ್ಯ ಜೊತೆ ಮಾತುಕತೆ ನಡೆಸಿದ್ದಾರೆ.
ಅರ್ಧ ಗಂಟೆಗೂ ಹೆಚ್ಚು ಕಾಲ ಸಭೆ ನಡೆಸಿದ ಇಬ್ಬರು ನಾಯಕರು ರಾಜಕೀಯ ವಿಷಯಗಳ ಕುರಿತು ಚರ್ಚೆ ನಡೆಸಿದ್ದಾರೆ. ಸಿಎಂ ಜೊತೆ ಮಾತುಕತೆ ನಡೆಸಿದ ನಂತರ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್, ನಾನು ಸಿಎಂ ಅವರನ್ನು ಭೇಟಿ ಮಾಡದೇ ಇನ್ಯಾರು ಭೇಟಿ ಮಾಡ್ತಾರೆ? ಬೇರೆ ಪಾರ್ಟಿ ಅವರನ್ನು ಭೇಟಿ ಮಾಡಬೇಕಿತ್ತಾ ಎಂದು ಪ್ರಶ್ನಿಸಿದ್ದಾರೆ.
ಸಿದ್ದರಾಮಯ್ಯ ಅವರು ನಮ್ಮ ಲೀಡರ್. ಸಿಎಂ ಆದವರು. ಹೀಗಾಗಿ ಸರ್ಕಾರದ ಹಲವು ವಿಚಾರಗಳ ಚರ್ಚೆಯಾಗಬೇಕಿರುತ್ತದೆ. ಹೀಗಾಗಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದೇನೆ ಎಂದಿದ್ದಾರೆ.