ಇಂದು ಕರುನಾಡ ಮಾಣಿಕ್ಯ, ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಅವರ 70ನೇ ಹುಟ್ಟುಹಬ್ಬ. ಈ ಪ್ರಯುಕ್ತ ಸ್ಯಾಮಡಲ್ ವುಡ್ ಅನೇಕ ತಾರೆಯರು ವಿಷ್ಣುದಾದನಿಗೆ ಬರ್ತ್ ಡೇ ಶುಕೋರುತ್ತಿದ್ದಾರೆ. ಅಭಿಮಾನಿಗಳು ನಾನಾ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿ ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಣೆ ಮಾಡುತ್ತಿದ್ದಾರೆ.
ಇನ್ನೂ ವಿಷ್ಣುದಾದನ ದೊಡ್ಡ ಅಭಿಮಾನಿಯಾಗಿರುವ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಸಹ ಟ್ವೀಟ್ ಮೂಲಕ ವಿಷ್ ಮಾಡಿದ್ದಾರೆ. “ ಅವರನ್ನು ಭೇಟಿ ಮಾಡಲು ಸಮಯದ ಆಶೀರ್ವಾದವಿತ್ತು. ಅವರೊಂದಿಗೆ ಕೆಲಸ ಮಾಡಲು ಸಿನಿಮಾದ ಆಶೀರ್ವಾದವಿತ್ತು. ಎಲ್ಲಕ್ಕಿಂತ ದೊಡ್ಡ ಆಶೀರ್ವಾದ ಅವರು ನನ್ನನ್ನು ನನ್ನ ಹೆಸರಿಂದ ಗುರುತಿಸುತ್ತಿದ್ದರು. ನನ್ನ IDOನ CDP ಬಿಡುಗಡೆ ನನಗೆ ಸಿಕ್ಕ ಭಾಗ್ಯ. ಎಂದಿಗೂ ಅವರ ಅಭಿಮಾನಿ. Happy 18th to all his Fans&Followers “ ಎಂದು ಟ್ವೀಟ್ ಮಾಡಿ ವಿಷ್ಣುವರ್ಧನ್ ಅವರ ಹುಟ್ಟುಹಬ್ಬಕ್ಕೆ ಹಾಗೂ ವಿಷ್ಣು ಅಭಿಮಾನಿಗಳಿಗೆ ಶುಭಕೋರಿದ್ದಾರೆ.