1-5 ನೇ ತರಗತಿಗಳಿಗೆ ಶಾಲೆ ಆರಂಭ – ಸ್ಪಷ್ಟನೆ ಕೊಟ್ಟ ಸಚಿವ ಸುಧಾಕರ್
ಕೋವಿಡ್ ಹಾವಳಿಯ ನಡುವೆ ದೈನಂದಿನ ಕೇಸ್ ಗಳ ಏರಿಳಿತ ಮುಂದುವರೆದಿದೆ. ಈ ನಡುವೆ ಮೂರನೇ ಹಾವಳಿಯ ಎಚ್ಚರಿಕೆಯನ್ನೂ ನೀಡಲಾಗಿದೆ.. ಆದ್ರೆ ಧೈರ್ಯ ಮಾಡಿ ಸರ್ಕಾರ ಪ್ರೌಢಶಾಲೆಗಳು ಹಾಗೂ ಕಾಲೇಜುಗಳ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳ ಆರಂಭಕ್ಕೆ ಅನುಮತಿ ನೀಡಿದೆ..
ಆದ್ರೆ ಕೋವಿಡ್ ಆತಂಕದ ನಡುವೆಯೇ 1 – 5 ನೇ ತರಗತಿ ವಿದ್ಯಾರ್ಥಿಗಳಿಗೂ ಕೂಡ ಶಾಲೆ ಆರಂಭಕ್ಕೆ ಸರ್ಕಾರ ಚಿಂತನೆ ನಡೆಸಿದೆ ಎನ್ನುವ ಸುದ್ದಿ ಇತ್ತೀಚೆಗೆ ಸಾಕಷ್ಟು ಚರ್ಚೆಯಾಗಿತ್ತು. ಆದ್ರೆ ಸಚಿವ ಸುಧಾಕರ್ ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಸದ್ಯ 6-8ನೇ ತರಗತಿಗಳನ್ನು ಟ್ರಯಲ್ ಆಗಿ ಆರಂಭಿಸುತ್ತಿದ್ದೇವೆ. ಪ್ರಾಥಮಿಕ ಶಾಲೆಗಳಾದ 1ರಿಂದ 5ನೇ ತರಗತಿ ತೆರೆಯಲು ಪ್ರಸ್ತುತ ಚಿಂತನೆ ಇಲ್ಲ. ಸದ್ಯಕ್ಕೆ ಪ್ರಾಥಮಿಕ ಶಾಲೆ ತೆರೆಯುವುದು ಬೇಡ ಎಂದು ತೀರ್ಮಾನಿಸಲಾಗಿದೆ ಎಂದು ಸುಧಾಕರ್ ಅವರು ಹೇಳಿದ್ದಾರೆ.
BPL ಕಾರ್ಡ್ ದಾರರಿಗೆ ಬಿಗ್ ಶಾಕ್ – ವಾರ್ಷಿಕ 1.20 ಲಕ್ಷ ರೂ. ಆದಾಯ ಹೊಂದಿರುವವರ ಕಾರ್ಡ್ ಕ್ಯಾನ್ಸಲ್..!
6-8ನೇ ತರಗತಿವರೆಗೆ ಶಾಲೆ ಆರಂಭಕ್ಕೆ ಸೆ.6ರಿಂದ ನಿಯಮಾನುಸಾರ ಅವಕಾಶ ಕಲ್ಪಿಸಲು ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಣಯಿಸಲಾಗಿದೆ. ಕೋವಿಡ್ ಪಾಸಿಟಿವ್ ದರ ಶೇ.2ಕ್ಕಿಂತ ಕಡಿಮೆ ಇರುವ ತಾಲೂಕುಗಳಲ್ಲಿ ಮಾತ್ರವೇ ಶಾಲೆಗಳನ್ನು ತೆರೆಯಲಾಗುವುದು ಎಂದರು.