ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಬಗ್ಗೆ ಸುಧಾಕರ್ ಸ್ಪಷ್ಟನೆ
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ನೈಟ್ ಕಫ್ರ್ಯೂ ಜಾರಿ ಮಾಡಲಾಗಿದೆ. ಕೇರಳ ಹಾಗೂ ಮಹಾರಾಷ್ಟ್ರ ಗಡಿ ಭಾಗಗಳಲ್ಲಿ ವಾರಾಂತ್ಯ ಕಪ್ರ್ಯೂ ಜಾರಿಗೊಳಿಸಲಾಗಿದೆ.
ಆದರೂ ಕೊರೊನಾ ಮೂರನೇ ಅಲೆಗೆ ಕಡಿವಾಣ ಹಾಕಲು ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡಲಾಗುವುದು ಎಂದು ಮಾತುಗಳು ರಾಜ್ಯದಲ್ಲಿ ಹರಿದಾಡುತ್ತಿವೆ.
ಈ ಬಗ್ಗೆ ಇದೀಗ ಸಚಿವ ಡಾ.ಕೆ.ಸುಧಾಕರ್ ಪ್ರತಿಕ್ರಿಯೆ ನೀಡಿದ್ದು, ರಾಜ್ಯ ಸರ್ಕಾರ ಮತ್ತೆ ರಾಜ್ಯವ್ಯಾಪಿ ಲಾಕ್ ಡೌನ್ ಹೇರುವ ಯೋಜನೆ ಹೊಂದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಮತ್ತೆ ರಾಜ್ಯವ್ಯಾಪಿ ಲಾಕ್ ಡೌನ್ ಹೇರುವ ಯೋಜನೆ ಹೊಂದಿಲ್ಲ. ರಾತ್ರಿ ಕಪ್ರ್ಯೂ ಹಾಗೂ ವಾರಂತ್ಯಾ ಕಪ್ರ್ಯೂ ಜಾರಿಯಲ್ಲಿ ಇರಲಿದೆ ಎಂದು ತಿಳಿಸಿದರು.
ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೂ ಕೊರೋನಾ ನಿಯಂತ್ರಣ ಕ್ರಮವಾಗಿ ಸೆಕ್ಷನ್ 144 ಜಾರಿಯಲ್ಲಿದೆ. ಆಗಸ್ಟ್ 16ರವರೆಗೆ ಕೊರೋನಾ ನಿಯಂತ್ರಣ ಕ್ರಮಗಳು ಜಾರಿಯಲ್ಲಿರಲಿವೆ. ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕಫ್ರ್ಯೂ ಜಾರಿಯಲ್ಲಿರಲಿದೆ ಎಂದು ಸಚಿವರು ಮಾಹಿತಿ ನೀಡಿದರು.