ಬೆಂಗಳೂರು ಲಾಕ್ ಡೌನ್ ಸುಳಿವು ನೀಡಿದ ಸುಧಾಕರ್
ಬೆಂಗಳೂರು : ಬೆಂಗಳೂರಿಗೆ ಕೆಲವು ವಿಶೇಷವಾದ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವ ಅವಶ್ಯಕತೆ ಮತ್ತು ಅನಿವಾರ್ಯ ಇದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಪರೋಕ್ಷವಾಗಿ ಲಾಕ್ ಡೌನ್ ಸುಳಿವು ನೀಡಿದ್ದಾರೆ.
ಬೆಂಗಳೂರಿನಲ್ಲಿ ನಿನ್ನೆ 11 ಸಾವಿರಕ್ಕೂ ಹೆಚ್ಚು ಕೊರೊನಾ ಕೇಸ್ ಗಳು ಪತ್ತೆಯಾಗಿದ್ದು, ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗದಲ್ಲಿ ಕೊರೊನಾ ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆ ಇಂದು ಸಿಎಂ ಬಿಎಸ್ ಯಡಿಯೂರಪ್ಪನವರನ್ನು ಇಂದು ಭೇಟಿ ಮಾಡಿ ತಾಂತ್ರಿಕ ಸಮಿತಿಯವರು ನೀಡಿದ ಕೆಲವೊಂದು ವರದಿಗಳ ಕುರಿತಂತೆ ಚರ್ಚೆ ನಡೆಸುತ್ತೇನೆ. ಅಲ್ಲದೆ ನಿನ್ನೆ ಸಂಜೆ ರಾಜ್ಯಪಾಲರನ್ನು ಕೂಡ ಭೇಟಿ ಮಾಡಿ ಚರ್ಚೆ ನಡೆಸಿದ್ದು, ಅವರು ಕೂಡ ಕೆಲ ಸಲಹೆಗಳನ್ನು ನೀಡಿದ್ದಾರೆ. ಬೆಂಗಳೂರಿಗೆ ವಿಶೇಷ ಕ್ರಮ ಅವಶ್ಯಕತೆ ಇದೆ. ಅಂತಹ ಅನಿವಾರ್ಯ ಉದ್ಭವವಾಗಿದೆ. ಅಲ್ಲದೆ ಕೊರೊನಾ ಸಮುದಾಯಕ್ಕೆ ಹರಿಡಿದೆ ಎಂದು ಕೇಂದ್ರ ಸರ್ಕಾರವೇ ಸ್ಪಷ್ಟಪಡಿಸಿದೆ ಎಂದು ತಿಳಿಸಿದರು.
ಇದೇ ವೇಳೆ ಬೆಂಗಳೂರು ಲಾಕ್ ಡೌನ್ ಬಗ್ಗೆ ಮಾತನಾಡಿ, ಬೆಂಗಳೂರು ಲಾಕ್ ಡೌನ್ ಬಗ್ಗೆ ಇಂದು ನಾನು ಸಿಎಂ ಬಿಎಸ್ ವೈರನ್ನು ಭೇಟಿ ಮಾಡಿ, ಬೆಂಗಳೂರಿಗೆ ಬಿಗಿ ಕ್ರಮ ತೆಗೆದುಕೊಳ್ಳದೇ ಹೋದರೆ ಮುಂದೆ ಕಷ್ಟ ಆಗುತ್ತದೆ. ನಾವು ಇದನ್ನು ನಿಯಂತ್ರಿಸುವುದು ಅಸಾಧ್ಯ ಎಂದು ಒಬ್ಬ ಆರೋಗ್ಯ ಸಚಿವನಾಗಿ ನಾನು ಕೂಡ ಹೇಳುತ್ತಿದ್ದೇನೆ. ನಾಳೆಯ ಸಭೆಯಲ್ಲಿ ಚರ್ಚೆ ಮಾಡಿ ಕಠಿಣ ನಿರ್ಧಾರ ಪ್ರಕಟ ಮಾಡ್ತೀವಿ ಎಂದು ಮಾಹಿತಿ ನೀಡಿದ್ದಾರೆ.










