`ಮುಂದಿನ 50 ದಿನಗಳವರೆಗೆ ಆರೋಗ್ಯ ಇಲಾಖೆ ಸಿಬ್ಬಂದಿಗೆ ರಜೆ ಇಲ್ಲ’
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಅಬ್ಬರ ಜೋರಾಗಿದೆ. ಪ್ರತಿದಿನ ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ. ಮುಂದಿನ ದಿನಗಳಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ.
ಈ ಹಿನ್ನೆಲೆಯಲ್ಲಿ ಮುಂದಿನ 50 ದಿನಗಳ ವರೆಗೆ ಆರೋಗ್ಯ ಇಲಾಖೆಯ ಸಿಬ್ಬಂದಿಗೆ ರಜೆ ನೀಡುವುದಿಲ್ಲ. ಮುಂದಿನ 50 ದಿನಗಳ ವರೆಗೆ ರಜೆಯನ್ನ ರದ್ದುಪಡಿಸಲಾಗಿದೆ ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಕೊರೊನಾ ಹೆಚ್ಚಳ ಬಗ್ಗೆ ತುರ್ತುಸುದ್ದಿಗೋಷ್ಠಿ ( press meet ) ನಡೆಸಿ ಮಾತನಾಡಿದ ಸುಧಾಕರ್, ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ.
ಕೋವಿಡ್ ವಿರುದ್ಧದ ಹೋರಾಡಲು ಆರೋಗ್ಯ ಇಲಾಖೆ ಸಿಬ್ಬಂದಿಗೆ ರಜೆ ರದ್ದು ಪಡಿಸಲಾಗಿದೆ. ನಾನೂ ಸೇರಿದಂತೆ ಯಾರಿಗೂ ರಜೆ ಇರೋದಿಲ್ಲ.
ಕೇವಲ ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗೆ ಅಷ್ಟೇ ಅಲ್ಲದೆ ವೈದ್ಯಕೀಯ ಶಿಕ್ಷಣ ಇಲಾಖೆಯ ಸಿಬ್ಬಂದಿಗಳ ರಜೆ ಕೂಡ ರದ್ದು ಪಡಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.