ಬೆಂಗಳೂರು : ರಾಜ್ಯದ ಕೋವಿಡ್-19 ಸ್ಥಿತಿಗತಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದ ಸಚಿವರ ಜೊತೆ ಸಂವಾದ ನಡೆಸಿದರು. ಇದರಲ್ಲಿ ಉಪಮುಖ್ಯಮಂತ್ರಿ ಸಿ ಎನ್ ಅಶ್ವತ್ಥ್ ನಾರಾಯಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಭಾಗಿಯಾಗಿದ್ದರು.
ಈ ವೇಳೆ ರಾಜ್ಯದ ಕೊರೊನಾ ಪರಿಸ್ಥಿತಿಯ ಬಗ್ಗೆ ಪ್ರಧಾನಿ ಮೋದಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಅವರು ಮಾಹಿತಿ ನೀಡಿದ್ದಾರೆ. ಅಲ್ಲದೆ ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ ಮತ್ತು ಸರ್ಕಾರ ಕೈಗೊಂಡಿರುವ ಕಾರ್ಯ ಯೋಜನೆಗಳ ವಿವರಗಳನ್ನು ಸಚಿವ ಸುಧಾಕರ್ ನೀಡಿದ್ದಾರೆ.
ಕೇವಲ ಹತ್ತು ನಿಮಿಷಗಳಲ್ಲಿ ರಾಜ್ಯ ಸ್ಥಿತಿಗತಿಯನ್ನು ವಿವರಿಸಲಾಗಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಬಳಲುತ್ತಿದ್ದವರ ಚೇತರಿಕೆ ಪ್ರಮಾಣ ಹೆಚ್ಚಳವಾಗಿದೆ. ಅದೇ ರೀತಿ ದಿನ ನಿತ್ಯ ನಡೆಸುವ ಟೆಸ್ಟ್ ಪ್ರಮಾಣಗಳಲ್ಲೂ ಹೆಚ್ಚಳವಾಗಿದೆ ಎಂದು ಪ್ರಧಾನಿಗೆ ಸುಧಾಕರ್ ಅವರು ಮಾಹಿತಿ ನೀಡಿದ್ದಾರೆ. ಇನ್ನು ರಾಜ್ಯದಲ್ಲಿ ಆಂಬ್ಯುಲೆನ್ಸ್ ಕೊರತೆ ಇಲ್ಲ ಎಂದು ಹೇಳಿದ್ದಾರೆ.