ADVERTISEMENT
Friday, February 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Karnataka Politics : ಗೊತ್ತು ಗುರಿ ಇಲ್ಲದ ಡಬ್ಬಲ್ ಸ್ಟಿಯರಿಂಗ್ ಪಕ್ಷ ಕಾಂಗ್ರೆಸ್ : ಸುಧಾಕರ್

Namratha Rao by Namratha Rao
July 26, 2022
in Newsbeat, Politics, ರಾಜಕೀಯ
sudhakar
Share on FacebookShare on TwitterShare on WhatsappShare on Telegram

ಗೊತ್ತು ಗುರಿ ಇಲ್ಲದ ಡಬ್ಬಲ್ ಸ್ಟಿಯರಿಂಗ್ ಪಕ್ಷ ಕಾಂಗ್ರೆಸ್

ಜನೋತ್ಸವ ಪೂರ್ವಭಾವಿ ಸಭೆಯಲ್ಲಿ ಸಚಿವ ಡಾ.ಕೆ. ಸುಧಾಕರ್ ಲೇವಡಿ

Related posts

No more worries about debt problems. For these three days, go and see him. Even the burden of debt that bothers you the most will disappear.

ಇನ್ನು ಸಾಲದ ಸಮಸ್ಯೆಗಳ ಚಿಂತೆ ಬೇಡ. ಈ ಮೂರು ದಿನ, ಹೋಗಿ ಅವನನ್ನು ನೋಡಿ. ಹೆಚ್ಚು ತೊಂದರೆ ಕೊಡುವ ಸಾಲದ ಹೊರೆಯೂ ಮಾಯವಾಗುತ್ತದೆ.

February 13, 2026
the elite badminton team prasanna yedekeri

ಜಾಹೀರಾತು ಲೋಕದ ಜಾದುಗಾರನ ‘ದಿ ಎಲೈಟ್ ಬ್ಯಾಡ್ಮಿಂಟನ್ ಕ್ಲಬ್ ‘ಸಿಎಂ ಕಪ್‌ನಲ್ಲೂ ಮೋಡಿ ಮಾಡುತ್ತಾ..?

February 13, 2026

ತುಮಕೂರು: ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಅಭಿವೃದ್ಧಿಯ ಡಬಲ್ ಇಂಜಿನ್ ಸರ್ಕಾರ ಬೇಕಾ ಅಥವಾ ಗೊತ್ತು ಗುರಿ ಇಲ್ಲದ ಡಬ್ಬಲ್ ಸ್ಟಿಯರಿಂಗ್ ಸರ್ಕಾರ ಬೇಕಾ ಎಂಬುದನ್ನು ಜನರೇ ನಿರ್ಧರಿಸಲಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅಭಿಪ್ರಾಯಪಟ್ಟರು.

ತುಮಕೂರು ಗ್ರಾಮಾಂತರ ಮತ್ತು ನೆಲಮಂಗಲದಲ್ಲಿ ಮಂಗಳವಾರ ಆಯೋಜಿಸಿದ್ದ ಜನೋತ್ಸವ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ನಮ್ಮದು ಡಬಲ್ ಇಂಜಿನ್ ಸರ್ಕಾರ. ಇದರಿಂದಾಗಿಯೇ ರೈತರಿಗೆ ಮಹಿಳೆಯರಿಗೆ, ವಿದ್ಯಾರ್ಥಿಗಳಿಗೆ ಸೇರಿದಂತೆ ಎಲ್ಲ ವರ್ಗದ ಜನರಿಗೆ ಹೆಚ್ಚಿನ ಅಭಿವೃದ್ಧಿ ಯೋಜನೆಗಳು ತಲುಪುತ್ತಿವೆ. ಆದರೆ ಕಾಂಗ್ರೆಸ್ ನಲ್ಲಿ ಪರಿಸ್ಥಿತಿಯೇ ಭಿನ್ನವಾಗಿದೆ ಎಂದರು.

ಕೆಪಿಸಿಸಿ ಅಧ್ಯಕ್ಷರು ಏರಿಗೆ ಎಳೆದರೆ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರು ನೀರಿಗೆ ಎಳೆಯುತ್ತಿದ್ದಾರೆ. ಇಂತಹ ಪಕ್ಷದಿಂದ ಅಭಿವೃದ್ಧಿ ನಿರೀಕ್ಷಿಸಲು ಸಾಧ್ಯವೇ ಎಂದು ಪ್ರಶ್ನಿಸಿದ ಸಚಿವರು, ನಮ್ಮದು ಜನಪರ ಸರ್ಕಾರ, ಜನರಿಗಾಗಿ ಜಾರಿಗೊಳಿಸಿದ ಯೋಜನೆಗಳು ಜನರಿಗೆ ತಲುಪಿವೆ. ಹಾಗಾಗಿ ಜನರ ಮಧ್ಯೆ ಕಾರ್ಯಕ್ರಮ ಮಾಡುತ್ತಿದ್ದೇವೆ. ಆದರೆ ಕಾಂಗ್ರೆಸ್ ನವರು ವ್ಯಕ್ತಿ ಉತ್ಸವ ಮಾಡಲು ಮುಂದಾಗಿದ್ದಾರೆ ಎಂದು ಲೇವಡಿ ಮಾಡಿದರು.

ಪ್ರಜಾಪ್ರಭುತ್ವವೇ ಜನರ ಹಬ್ಬ

ಪ್ರಜಾಪ್ರಭುತ್ವವೇ ಜನರ ಹಬ್ಬವಾಗಿದೆ. ಇದನ್ನು ಬಿಜೆಪಿ ಮಾಡುತ್ತಿದೆ. ಜನರಿಗಾಗಿ, ಜನರಿಗೋಸ್ಕರ ಮತ್ತು ಜನರ ಮಧ್ಯೆ ಕಾರ್ಯಕ್ರಮ ಮಾಡುತ್ತಿದ್ದೇವೆ. ಆದರೆ ವ್ಯಕ್ತಿಪೂಜೆ ಮಾಡಲು ಹೊರಟಿರುವ ಕಾಂಗ್ರೆಸ್ ಪಕ್ಷಕ್ಕೆ ಜನಪರ ಕಾಳಜಿ ಇದೆಯೇ ಎಂದು ಪ್ರಶ್ನಿಸಿದರು. ಈ ಹಿಂದೆ ಕೋವಿಡ್ ಕಾರಣ ಯಾವುದೇ ಸಮಾವೇಶ ಮಾಡಲು ಸಾಧ್ಯವಾಗಲಿಲ್ಲ. ಜನರು ಪಕ್ಷದ ಪರ ಇದ್ದಾರೆ, ಪಕ್ಷದ ಮೇಲೆ ಜನರಿಗೆ ಅಭಿಮಾನ ಇದೆ ಎಂದು ಸಚಿವರು ಅಭಿಪ್ರಾಯಪಟ್ಟರು.

ಇದೇ 28ರಂದು ಸಮಾವೇಶದಲ್ಲಿ ಸೇರುವ ಜನಸಾಗರವನ್ನು ಕಂಡು ಬಿಜೆಪಿ ಶಕ್ತಿ ಏನು ಎಂಬುದು ಅರಿವಾಗಬೇಕು.
ಆ ಮೂಲಕ 2023ರ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲು ಸುಲಭವಾಗಲಿದೆ. ಆಯುಷ್ಮಾನ್ ಭಾರತ್, ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ಎಲ್ಲರಿಗೂ ಆರೋಗ್ಯ ಸಿಗುತ್ತಿದೆ. ಇದನ್ನು ಮಧ್ಯಮವರ್ಗದ ಜನರಿಗೂ ವಿಸ್ತರಣೆ
ಮಾಡಲಾಗಿದೆ ಎಂದರು.

ನಿರೀಕ್ಷೆಗೆ ಮೀರಿ ಸ್ಪಂದನೆ

ರಾಜ್ಯದ ಐದು ಕಡೆಗಳಲ್ಲಿ ಜನೋತ್ಸವ ಕಾರ್ಯಕ್ರಮ ನಡೆಸಲು ಉದ್ಧೇಶಿಸಲಾಗಿದೆ. ಮೊದಲ ಕಾರ್ಯಕ್ರಮ ದೊಡಬಳ್ಳಾಪುರದಲ್ಲಿ ನಡೆಯಲಿದ್ದು, ಲಕ್ಷಾಂತರ ಜನರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ನಾಲ್ಕು ಜಿಲ್ಲೆಗಳಿಂದ ಆಗಮಿಸುವ ಜನಸಾಗರ ವಿರೋಧಪಕ್ಷಗಳಿಗೆ ಎಚ್ಚರಿಕೆ ನೀಡಲಿದೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.

ಸಮಾಜ ಒಡೆಯುವುದು ಕಾಂಗ್ರೆಸ್ ಹುಟ್ಟುಗುಣ
ಒಂದು ಸಮುದಾಯದ ಬೆಂಬಲದಿಂದ ಮುಖ್ಯಮಂತ್ರಿಯಾಗಲು ಸಾಧ್ಯವಿಲ್ಲ, ಒಂದು ಸಮುದಾಯವನ್ನು ಮತ್ತೊಂದು ಸಮುದಾಯಕ್ಕೆ ಹೋಲಿಕೆ ಮಾಡುವುದು ಶೋಭೆ ತರಲ್ಲ. ಈ ಹೇಳಿಕೆಗೆ ಸಮುದಾಯವೂ ವಿರೋಧ ವ್ಯಕ್ತಪಡಿಸುತ್ತಿದೆ. ಹೋಲಿಕೆ ಮಾಡುವುದು, ವರ್ಗೀಕರಣ ಮಾಡುವುದು ಕಾಂಗ್ರೆಸ್ ಹುಟ್ಟುಗುಣ. ಧರ್ಮ ಧರ್ಮದ ಮಧ್ಯೆ, ವರ್ಗ ವರ್ಗಗಳ ಮಧ್ಯೆ, ಜಾತಿ ಜಾತಿಗಳ ಮಧ್ಯೆ ಬಿರುಕು ಮೂಡಿಸುವುದು ಕಾಂಗ್ರೆಸ್ ಹುಟ್ಟುಗುಣ ಎಂದು ಕಿಡಿ ಕಾರಿದರು.

ವ್ಯಕ್ತಿಯ ವಿಜೃಂಭಣೆ ಸಿದ್ದರಾಮೋತ್ಸವ

ವ್ಯಕ್ತಿಯ ವೈಭವೀಕರಣ ಮಾಡುವುದರಿಂದ ಪ್ರಜಾಪ್ರಭುತ್ವದ ಮೂಲ ಆಶಯಕ್ಕೆ ಧಕ್ಕೆ ಬರಲಿದೆ. ನಾವು ಮಾಡುತ್ತಿರುವುದು ಪ್ರಜಾಪ್ರಭುತ್ವ ಎತ್ತಿ ಹಿಡಿಯುವ ಕಾರ್ಯಕ್ರಮ. ಅವರು ಇಡೀ ರಾಜ್ಯ ಸೇರಿಸಿ ಒಂದು ಸಮಾವೇಶ ಮಾಡುತ್ತಿದ್ದರೆ ನಾವು ರಾಜ್ಯದ ಐದು ಭಾಗಗಳಲ್ಲಿ ಐದು ಸಮಾವೇಶಗಳನ್ನು ಮಾಡುತ್ತಿದ್ದೇವೆ. ಅದಕ್ಕೂ ಇದಕ್ಕೂ ಹೋಲಿಕೆ ಮಾಡಬಾರದು ಎಂದು ಸಚಿವರು ಹೇಳಿದರು.

ವೈದ್ಯರ ಕೊರತೆ ಇಲ್ಲ

ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಇಲ್ಲ, ಪ್ಯಾರಾಮೆಡಿಕಲ್ ಸಿಬ್ಬಂದಿ ಮತ್ತು ನರ್ಸಿಂಗ್ ಸಿಬ್ಬಂದಿ ಕೊರತೆ ಇದ್ದು, ಈ ಬಗ್ಗೆ ಆರ್ಥಿಕ ಇಲಾಖೆಯೊಂದಿಗೆ ಚರ್ಚೆ ನಡೆಸಲಾಗಿದೆ. ಶೀಘ್ರದಲ್ಲಿಯೇ ಅಗತ್ಯ ಸಿಬ್ಬಂದಿಯನ್ನು ತುಂಬುವ ಕೆಲಸ ಮಾಡಲಾಗುವುದು ಎಂದು ಭರವಸೆ ನೀಡಿದರು.

ಮೊಯ್ಲಿಗೆ ಟಾಂಗ್

ಬಿಜೆಪಿ ಅಭಿವೃದ್ಧಿ ಮಾಡದೆ ಸಮಾವೇಶ ಮಾಡುತ್ತಿದೆ ಎಂಬ ಮಾಜಿ ಸಂಸದ ಮೊಯ್ಲಿ ಅವರ ಹೇಳಿಕೆ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಮೊಯ್ಲಿ ಆರೋಪ ಕಾಂಗ್ರೆಸ್ ಪಕ್ಷಕ್ಕೆ ಮತ್ತು ಸ್ವತಃ ಅವರಿಗೇ ಅನ್ವಯಿಸಲಿದೆ. ದೇಶದಲ್ಲಿಯೇ ಕಾಂಗ್ರೆಸ್ ಶೂನ್ಯಕ್ಕೆ ತಲುಪುತ್ತಿದ್ದು, ಸಂಸದರಾಗಿ ಸೋತು ಮೊಯ್ಲಿ ಅವರೂ ಮೊಲೆ ಸೇರಿದ್ದಾರೆ ಹಾಗಾಗಿ ಅವರ ಆರೋಪ ಅವರ ಪಕ್ಷಕ್ಕೆ ಮತ್ತು ಅವರಿಗೆ ಸೂಕ್ತ ಎಂದು ತಿರುಗೇಟು ನೀಡಿದರು.

ಬಿಜೆಪಿ ಶಿಸ್ತು ಮತ್ತು ಸಂಯಮದ ಪಕ್ಷವಾಗಿದೆ. ಸುರೇಶ್ ಗೌಡರ ಸೋಲು ಅನಿರೀಕ್ಷಿತ. 2023ರಲ್ಲಿ ಜಿಲ್ಲೆಯಲ್ಲಿಯೇ ಮೊದಲ ಟಿಕೆಟ್ ಸುರೇಶ್ ಗೌಡರಗೆ ಘೋಷಣೆಯಾಗಲಿದೆ. ನನಗಿರುವ ಮಾಹಿತಿ ಮತ್ತು ಗುಪ್ತಚರ ಮಾಹಿತಿಯಿಂದ ಹೇಳುತ್ತಿದ್ದು, ಪಕ್ಷವನ್ನು ಶಕ್ತಿಯುತವಾಗಿ ಸಂಘಟಿಸಲು ಎಲ್ಲರೂ ಕೈ ಜೋಡಿಸಬೇಕು ಎಂದು ಕೋರಿದರು.

ಮೂರು ವರ್ಷದ ಆಡಳಿತದಲ್ಲಿ ಯಶಸ್ವಿ ಕೋವಿಡ್ ನಿರ್ವಹಣೆ ಜೊತೆಗೆ ಅತಿವೃಷ್ಟಿಯನ್ನೂ ಸಮರ್ಥವಾಗಿ ಎದುರಿಸಲಾಗಿದೆ. ಅನೇಕರಿಗೆ ಪುನರ್ವಸತಿ ಕಲ್ಪಿಸಲಾಗಿದೆ, ಅನೇಕ ದೇಶಗಳು ಕೋವಿಡ್ ನಿಂದ ಆರ್ಥಿಕವಾಗಿ ದಿವಾಳಿಯಾಗುತ್ತಿವೆ. ನಮ್ಮ ನೆರೆ ರಾಷ್ಟ್ರ ಶ್ರೀಲಂಕಾ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಆದರೆ ಕರ್ನಾಟಕ ಕಳೆದ ಒಂದು ವರ್ಷದಲ್ಲಿ ದೇಶದಲ್ಲಿಯೇ ಅತ್ಯಧಿಕ ವಿದೇಶಿ ಬಂಡವಾಳ ಹೂಡಿಕೆ ಮತ್ತು ಜಿಎಸ್ ಟಿ ಪಡೆದ ರಾಜ್ಯವಾಗಿ ಖ್ಯಾತಿಗಳಿಸಿದೆ ಎಂದರು.

ಅಭಿವೃದ್ಧಿಗೆ ವೇಗ ಸಿಕ್ಕಿದೆ

ಕಳೆದ ಮೂರು ವರ್ಷಗಳಿಂದ ಇಡೀ ವಿಶ್ವವನ್ನು ಕೋವಿಡ್ ಕಾಡಿದ ಹಿನ್ನೆಲೆಯಲ್ಲಿ ಅಭಿವೃದ್ಧಿ ಕುಂಟಿತವಾಗಿತ್ತು. ಆದರೆ ಈಗ ರಾಜ್ಯದಲ್ಲಿ ಅಭಿವೃದ್ಧಿಗೆ ವೇಗ ಸಿಕ್ಕಿದೆ. ಎಲ್ಲ ವರ್ಗದ ಜನರಿಗೆ ಕಾರ್ಯಕ್ರಮ ನೀಡಲಾಗುತ್ತಿದೆ. ಡಬಲ್ ಇಂಜಿನ್ ಸರ್ಕಾರ ಎಲ್ಲರ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ. ಇದರಿಂದ ಎರಡುಪಟ್ಟು ಅನುಕೂಲ ಜನರಿಗೆ ಆಗಲಿದೆ ಎಂದರು.

ರೈತಮಕ್ಕಳ ಅನುಕೂಲಕ್ಕಾಗಿ ದೇಶದಲ್ಲಿಯೇ ಮೊದಲಬಾರಿಗೆ ವಿದ್ಯಾನಿಧಿ ಯೋಜನೆ ಜಾರಿಗೊಳಿಸಲಾಗಿದೆ. ಇದರಿಂದ ರಾಜ್ಯದ 10 ಲಕ್ಷ ಜನರಿಗೆ ಅನುಕೂಲವಾಗಲಿದೆ. ಈ ಹಿಂದೆ ಕಾಂಗ್ರೆಸ್ ಕೆಲ ಸಮುದಾಯದ ಮಕ್ಕಳಿಗೆ ಮಾತ್ರ ಪ್ರವಾಸ ಭಾಗ್ಯ, ಕೆಲ ಸಮುದಾಯದ ಮಕ್ಕಳಿಗೆ ಮಾತ್ರ ಶೂ ನೀಡಿತ್ತು. ಆದರೆ ನಮ್ಮ ಸರ್ಕಾರ ಇಂತಹ ಯಾವುದೇ ತಾರತಮ್ಯ ಮಾಡದೆ ಜಾತಿ, ಧರ್ಮ, ಶ್ರೀಮಂತ, ಬಡವ ಎಂಬ ಯಾವುದೇ ಬೇಧವಿಲ್ಲದೆ ನೀಡುತ್ತಿದೆ ಎಂದು ಹೇಳಿದರು.

ಸರ್ವರ ಅಭಿವೃದ್ಧಿಯೇ ಮೂಲಮಂತ್ರವಾಗಿ ಸರ್ಕಾರ ಕಾರ್ಯನಿರ್ವಹಿಸುತ್ತಿದ್ದು, ಇದು ನಮ್ಮ ಸರ್ಕಾರದ ದಿಕ್ಸೂಚಿಯಾಗಿದೆ. ನಮ್ಮ ಪ್ರಣಾಳಿಕೆಗೆ ಅನುಗುಣವಾಗಿ ನಡೆದುಕೊಂಡಿದ್ದೇವೆ. ಜನರಿಗೆ ನೀಡಿರುವ ಪ್ರತಿ ಯೋಜನೆಯ ಬಗ್ಗೆ ಜನರಿಗೆ ಅರಿವು ಮೂಡಿಸುವ ಕೆಲಸ ಮಾಡಬೇಕು. ಹಾಗಾಗಿಯೇ ಜನೋತ್ಸವ ಆಯೋಜಿಸಲಾಗುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುವ ಮೂಲಕ ಸಹಕರಿಸುವಂತೆ ಅವರು ಕೋರಿದರು. ಬಲಹೀನ ಪ್ರದೇಶದಲ್ಲಿಯೇ ಬಲಪ್ರದರ್ಶನ ನಡೆಯಲಿದೆ

ಕೊರಟಗೆರೆ: ರಾಜ್ಯದಲ್ಲಿ ಬಿಜೆಪಿ ಬಲಹೀನವಾಗಿರುವ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಂದಲೇ ಲಕ್ಷಾಂತರ ಜನರು ಜನೋತ್ಸವದಲ್ಲಿ ಭಾಗವಹಿಸಲಿದ್ದು, ಡಬಲ್ ಇಂಜಿನ್ ಸರ್ಕಾರದ ಬಗ್ಗೆ ರಾಜ್ಯದ ಜನತೆಗೆ ಸ್ಪಷ್ಟ ಸಂದೇಶ ನೀಡಲಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ವಿಶ್ವಾಸ ವ್ಯಕ್ತಪಡಿಸಿದರು.

ಕೊರಟಗೆರೆಯಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷದ ಶಕ್ತಿ ಕಡಿಮೆ ಇರುವ ಪ್ರದೇಶದಲ್ಲಿಯೇ ಮೊದಲ ಸಮಾವೇಶ ನಡೆಯುತ್ತಿದೆ. ಇಲ್ಲಿ ಭಾಗವಹಿಸುವ ಜನಸಾಗರ ನೀಡುವ ಸಂದೇಶ ಇಡೀ ರಾಜ್ಯಕ್ಕೆ ಅರಿವಾಗಲಿದೆ. ಈ ರಾಜ್ಯದ ಜನರು ಸರ್ಕಾರದ ಆಡಳಿತ, ಕಾರ್ಯವೈಖರಿ ಇಷ್ಟಪಟ್ಟಿದ್ದಾರೆ ಎಂಬ ಸಂದೇಶ ಸ್ಪಷ್ಟವಾಗಲಿದೆ ಎಂದು ಹೇಳಿದರು.

ಅಲ್ಲದೆ ಜನಪರ ಆಡಳಿತ ನೀಡುತ್ತಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಮುಂದುವರಿಸಬೇಕು ಮತ್ತು ಮುಂದುವರಿಸುತ್ತಾರೆ ಎಂಬ ಸಂದೇಶ ಇಲ್ಲಿಂದ ನೀಡಬೇಕು. ಹೆಚ್ಚಿನ ಜನರು ಸೇರುತ್ತಿರುವ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ಪಕ್ಷದ ಘನತೆ ಮತ್ತು ಗೌರವ ಎತ್ತಿಹಿಡಿಯುವ ಕೆಲಸ ಮಾಡಬೇಕು, ಶಿಸ್ತಿನಿಂದ ವರ್ತಿಸುವ ಮೂಲಕ ಪಕ್ಷದ ಗೌರವ ಎತ್ತಿಹಿಡಿಯಬೇಕು, ಜನರ ವಿಶ್ವಾಸಕ್ಕೆ ಸದಾ ಋಣಿಯಾಗಿದ್ದೇನೆ, ಪಕ್ಷ ಸಂಘಟನೆ ಮೂಲಕ ಒಗ್ಗಟ್ಟು ಪ್ರದರ್ಶಿಸುತ್ತಿರುವುದು ಕಾರ್ಯಕರ್ತರ ಶಿಸ್ತಿಗೆ ನಿದರ್ಶನವಾಗಿದೆ. ಹಾಗಾಗಿ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನಿಗೂ ನಾನು ಋಣಿಯಾಗಿದ್ದೇನೆ ಎಂದು ಸಚಿವರು ಹೇಳಿದರು.

Tags: #saakshatvKarnataka politicsSudhakar
ShareTweetSendShare
Join us on:

Related Posts

No more worries about debt problems. For these three days, go and see him. Even the burden of debt that bothers you the most will disappear.

ಇನ್ನು ಸಾಲದ ಸಮಸ್ಯೆಗಳ ಚಿಂತೆ ಬೇಡ. ಈ ಮೂರು ದಿನ, ಹೋಗಿ ಅವನನ್ನು ನೋಡಿ. ಹೆಚ್ಚು ತೊಂದರೆ ಕೊಡುವ ಸಾಲದ ಹೊರೆಯೂ ಮಾಯವಾಗುತ್ತದೆ.

by admin
February 13, 2026
0

ಇನ್ನು ಸಾಲದ ಸಮಸ್ಯೆಗಳ ಚಿಂತೆ ಬೇಡ. ಈ ಮೂರು ದಿನ, ಹೋಗಿ ಅವನನ್ನು ನೋಡಿ. ಹೆಚ್ಚು ತೊಂದರೆ ಕೊಡುವ ಸಾಲದ ಹೊರೆಯೂ ಮಾಯವಾಗುತ್ತದೆ. ಇಂದು ನಾವು ಕೀ...

the elite badminton team prasanna yedekeri

ಜಾಹೀರಾತು ಲೋಕದ ಜಾದುಗಾರನ ‘ದಿ ಎಲೈಟ್ ಬ್ಯಾಡ್ಮಿಂಟನ್ ಕ್ಲಬ್ ‘ಸಿಎಂ ಕಪ್‌ನಲ್ಲೂ ಮೋಡಿ ಮಾಡುತ್ತಾ..?

by admin
February 13, 2026
0

ಪ್ರಸನ್ನ ಎಡಿಕೇರಿ..! ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ದಿ ಎಲೈಟ್ ಬ್ಯಾಡ್ಮಿಂಟನ್ ತಂಡದ ಮಾಲೀಕ. ಐಎಎಸ್ ಅಧಿಕಾರಿ ಡಾ.ಸೆಲ್ವ ಕುಮಾರ್ ಅವರು ದಿ ಎಲೈಟ್ ಬ್ಯಾಡ್ಮಿಂಟನ್ ತಂಡವನ್ನು...

ಗನ್ ಹಿಡಿದು ‘ಕೈ’ ಮುಖಂಡ ಡ್ಯಾನ್ಸ್… ಕ್ರಮ ನಿಶ್ಚಿತ ಎಂದ ಗೃಹ ಸಚಿವ ಪರಮೇಶ್ವರ್

ಗನ್ ಹಿಡಿದು ‘ಕೈ’ ಮುಖಂಡ ಡ್ಯಾನ್ಸ್… ಕ್ರಮ ನಿಶ್ಚಿತ ಎಂದ ಗೃಹ ಸಚಿವ ಪರಮೇಶ್ವರ್

by Shwetha
February 13, 2026
0

ಗನ್ ಹಿಡಿದು ‘ದುರಂಧರ್’ ಚಿತ್ರದ ಶೈಲಿಯಲ್ಲಿ ನೃತ್ಯ ಮಾಡಿದ ಕಾಂಗ್ರೆಸ್ ಮುಖಂಡ ಮತೀನ್ ಪಟೇಲ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್...

ಫೆ. 19ಕ್ಕೆ ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿ ಸಭೆ… ಮಹತ್ವದ ರಾಜಕೀಯ ಚರ್ಚೆಗೆ ಸಜ್ಜು

ಫೆ. 19ಕ್ಕೆ ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿ ಸಭೆ… ಮಹತ್ವದ ರಾಜಕೀಯ ಚರ್ಚೆಗೆ ಸಜ್ಜು

by Shwetha
February 13, 2026
0

ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿ ಸಭೆ ಫೆಬ್ರವರಿ 19ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ಮುಂದಿನ ರಾಜಕೀಯ ಹಾಗೂ ಸಂಘಟನಾತ್ಮಕ ತಂತ್ರಗಳನ್ನು ರೂಪಿಸಲು ಈ ಸಭೆ ಮಹತ್ವ...

ರಾಜಕೀಯದ ರಣಕಣದಿಂದ ಬಣ್ಣದ ಲೋಕಕ್ಕೆ ಹಾರಿದ ಜೆಡಿಎಸ್ ನಾಯಕ: ನಿರ್ಮಾಪಕನಾಗಿ ಸಾರಾ ಮಹೇಶ್ ಗ್ರ್ಯಾಂಡ್ ಎಂಟ್ರಿ

ರಾಜಕೀಯದ ರಣಕಣದಿಂದ ಬಣ್ಣದ ಲೋಕಕ್ಕೆ ಹಾರಿದ ಜೆಡಿಎಸ್ ನಾಯಕ: ನಿರ್ಮಾಪಕನಾಗಿ ಸಾರಾ ಮಹೇಶ್ ಗ್ರ್ಯಾಂಡ್ ಎಂಟ್ರಿ

by Shwetha
February 13, 2026
0

ರಾಜಕೀಯ ಮತ್ತು ಸಿನಿಮಾ, ಇವೆರಡೂ ಕ್ಷೇತ್ರಗಳು ಸದಾ ಒಂದಕ್ಕೊಂದು ಬೆಸೆದುಕೊಂಡೇ ಸಾಗಿವೆ. ತಮಿಳುನಾಡು, ಆಂಧ್ರಪ್ರದೇಶ ಮಾತ್ರವಲ್ಲದೆ ಕರ್ನಾಟಕದಲ್ಲಿಯೂ ಸಿನಿಮಾ ರಂಗದ ಗಣ್ಯರು ರಾಜಕೀಯಕ್ಕೆ ಬರುವುದು ಹಾಗೂ ರಾಜಕೀಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram