ಬೆಂಗಳೂರು : ಸರ್ಕಾರ ಸರ್ಕಾರಿ ಆಸ್ಪತ್ರೆಗಳಿಗೆ ಆಮ್ಲಜನಕ ಪೂರೈಸುವಲ್ಲಿ ಏದುಸಿರು ಬಿಡುತ್ತಿದೆ ಎಂಬ ಮಾಜಿ ಸಿಎಂ ಹೆಚ್ ಡಿ ಕುಮಾರ್ ಸ್ವಾಮಿ ಅವರ ಟ್ವೀಟ್ ಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಅವರು ತಿರುಗೇಟು ನೀಡಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಸುಧಾಕರ್, “ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರೇ, ಸರ್ಕಾರಿ ಆಸ್ಪತ್ರೆಗಳಲ್ಲಿ ಆಮ್ಲಜನಕ ಪೂರೈಸುವಲ್ಲಿ ನಮ್ಮ ಸರ್ಕಾರ ಸಮರ್ಥವಿದೆ. ಈಗಾಗಲೇ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ. ರೈತರಿಗೂ ಯೂರಿಯಾ ಗೊಬ್ಬರ ಪೂರೈಸುವಲ್ಲಿ ಸಶಕ್ತವಾಗಿದೆ. ಆಡಿದ ಮಾತು, ಬಿಟ್ಟ ಬಾಣ, ಕಳೆದ ಸಮಯ ಮತ್ತು ಕೈತಪ್ಪಿ ಹೋದ ಅವಕಾಶ ಇವು ಎಂದಿಗೂ ಮರಳಿ ಬಾರವು ಎಂದು ಛಾಟಿ ಬೀಸಿದ್ದಾರೆ.
ಹೆಚ್ ಡಿಕೆ ಟ್ವೀಟ್ ನಲ್ಲಿ, “ಸರ್ಕಾರಿ ಆಸ್ಪತ್ರೆಗಳಿಗೆ ಆಮ್ಲಜನಕ ಪೂರೈಸುವಲ್ಲಿ ಏದುಸಿರು ಬಿಡುತ್ತಿರುವ ರಾಜ್ಯ ಸರ್ಕಾರ ರಾಜ್ಯದ ರೈತರಿಗೆ ರಸಗೊಬ್ಬರ, ವಿಶೇಷವಾಗಿ ಯೂರಿಯಾ, ಸಮರ್ಪಕವಾಗಿ ಪೂರೈಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದರು..









