ಬೆಂಗಳೂರು : ನಂಜನಗೂಡು ಆರೋಗ್ಯಾಧಿಕಾರಿ ಡಾ.ನಾಗೇಂದ್ರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧ ಜಿಲ್ಲಾ ಪಂಚಾಯತಿ ಸಿಇಓ ಪ್ರಶಾಂತ್ ಮಿಶ್ರ ಅಮಾನತಿಗೆ ಆಗ್ರಹಿಸಿ ನಡೆಸುತ್ತಿದ್ದ ಪ್ರತಿಭಟನೆಯನ್ನು ವೈದ್ಯರು ಹಿಂಪಡೆದಿದ್ದಾರೆ. ಈ ಹಿನ್ನೆಲೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಅವರು ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘಕ್ಕೆ ಧನ್ಯವಾದ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸುಧಾಕರ್, “ಕೋವಿಡ್ ಸಂದರ್ಭದಲ್ಲಿ ವೈದ್ಯರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ರಾಜ್ಯ ಸರ್ಕಾರಕ್ಕೆ ಅರಿವಿದೆ. ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಬಿ.ಎಸ್ ಯಡಿಯೂರಪ್ಪ ಅವರು ವೈದ್ಯರ ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿರುವ ಹಿನ್ನೆಯಲ್ಲಿ, ನೆನ್ನೆ ಕರೆ ನೀಡಲಾಗಿದ್ದ ಮುಷ್ಕರ ವಾಪಸ್ ಪಡೆದಿರುವ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘಕ್ಕೆ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.