ನಿಗದಿತ ಗುರಿಗಿಂತ ಕಡಿಮೆ ಕೋವಿಡ್ ಟೆಸ್ಟ್ ಗಳನ್ನು ಮಾಡುತ್ತಿರುವ ಸರ್ಕಾರಿ ಮತ್ತು ಖಾಸಗಿ ಮೆಡಿಕಲ್ ಕಾಲೇಜುಗಳ ಮುಖ್ಯಸ್ಥರೊಂದಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ಬುಧವಾರ ವಿಡಿಯೋ ಸಮಾಲೋಚನೆ ನಡೆಸಿದರು. ಈಗಾಗಲೇ ನೀಡಿರುವ ಗುರಿಯಂತೆ ಟೆಸ್ಟ್ ಗಳನ್ನು ನಡೆಸಲು ಕ್ರಮಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಸಂವಾದದ ವೇಳೆ ಕಾಲೇಜುಗಳ ಮುಖ್ಯಸ್ಥರು ನಿಗದಿತ ಗುರಿ ತಲುಪಲು ಎದುರಾಗಿರುವ ಅಡೆತಡೆಗಳ ಪ್ರಸ್ತಾಪಿಸಿದಾಗ, ಅವುಗಳನ್ನು ಬಗೆಹರಿಸುವುದಾಗಿಯೂ ಸಚಿವರು ಈ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು. ಸಂವಾದದಲ್ಲಿ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಕೋವಿಡ್ ಟೆಸ್ಟ್ ಗಳ ಮೇಲ್ವಿಚಾರಣೆ ನೋಡಿಕೊಳ್ಳುತ್ತಿರುವ ಶಾಲಿನಿ ರಜನೀಶ್ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ಮತ್ತೊಂದು ಭೀಕರ ಆಕ್ಸಿಡೆಂಟ್.. ಸ್ಥಳದಲ್ಲೇ ಮೂವರು ಐಐಟಿ ವಿದ್ಯಾರ್ಥಿಗಳ ಸಾವು
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬೋಸೇಗೌಡನದೊಡ್ಡಿ ಗ್ರಾಮದ ಬಳಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ, ಇದರಲ್ಲಿ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತಮಿಳುನಾಡು ಮೂಲದ ಲಾರಿ...