ಶಾರ್ಟ್ ಸರ್ಕ್ಯೂಟ್ನಿಂದ ಕಬ್ಬು ಸುಟ್ಟು ಭಸ್ಮ Saaksha Tv
ಬೆಳಗಾವಿ: ಶಾರ್ಟ್ ಸರ್ಕ್ಯೂಟ್ನಿಂದಾಗಿ ಕಬ್ಬಿನ ಗದ್ದೆಗೆ ಬೆಂಕಿ ತಗುಲಿ ಸುಮಾರು 5 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಕಬ್ಬು ಸುಟ್ಟು ಭಸ್ಮವಾಗಿದೆ.
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಶಿವಾಪೂರ ಗ್ರಾಮದಲ್ಲಿ ತಡರಾತ್ರಿ ಘಟನೆ ನಡೆದಿದ್ದು, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ. ನೂರಾರು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಕಬ್ಬು ಬಚಾವ್ ಆಗಿದೆ.
ಘಟನೆ ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಕಿ ಹೊತ್ತಿಕೊಳ್ಳಲು ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ರೈತರು ಆರೋಪಿಸಿದ್ದಾರೆ.