ಪ್ರಧಾನಿ ಮೋದಿ ಕಾಶ್ಮೀರ ಬೇಟಿಗೂ ಮುನ್ನ ಆತ್ಮಹತ್ಯಾ ದಾಳಿ ವಿಫಲ…..
ಪ್ರಧಾನಿ ನರೇಂದ್ರ ಮೋದಿಯವರು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡುವ ಎರಡು ದಿನಗಳ ಮೊದಲು ಆತ್ಮಾಹುತಿ ವಸ್ತ್ರಗಳನ್ನ ಧರಿಸಿದ್ದ ಇಬ್ಬರು ಭಾರೀ ಶಸ್ತ್ರಸಜ್ಜಿತ ಜೈಶ್-ಎ-ಮೊಹಮ್ಮದ್ ಉಗ್ರರನ್ನು ಸೇನೆ ಹೊಡೆದುರುಳಿಸಿದೆ. ಈ ಮೂಲಕ ಜಮ್ಮುವಿನ ಸುಂಜ್ವಾನ್ನಲ್ಲಿ ಪ್ರಮುಖ ಆತ್ಮಹತ್ಯಾ ದಾಳಿಯನ್ನು ಭದ್ರತಾ ಪಡೆಗಳು ವಿಫಲಗೊಳಿಸಿವೆ.
ಗುಂಡಿನ ಚಕಮಕಿಯಲ್ಲಿ ಸಿಐಎಸ್ಎಫ್ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದು, ನಾಲ್ವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಪ್ರಧಾನಿ ನರೇದ್ರ ಮೋದಿಯವರು ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡುವ ಎರಡು ದಿನಗಳ ಮೊದಲು “ಇಬ್ಬರು ಉಗ್ರಗಾಮಿಗಳ ತಟಸ್ಥಗೊಳಿಸುವ ಕಾರ್ಯಾಚರಣೆ ನಡೆದಿದೆ. ಇದು ಜಮ್ಮುವಿನ ಶಾಂತಿಯುತ ವಾತಾವರಣವನ್ನು ಕದಡುವ ಮತ್ತು ಪ್ರಧಾನಿ ಭೇಟಿಯನ್ನು ಹಾಳು ಮಾಡುವ ದೊಡ್ಡ ಪಿತೂರಿಯ ಭಾಗವಾಗಿದೆ ಎಂದು ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ಹೇಳಿದ್ದಾರೆ.
ರಾಷ್ಟ್ರೀಯ ಪಂಚಾಯತ್ ದಿವಾಸ್ನಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಏಪ್ರಿಲ್ 24 ರಂದು ಸಾಂಬಾ ಜಿಲ್ಲೆಯ ಪಲ್ಲಿಗೆ ಭೇಟಿ ನೀಡಲಿದ್ದಾರೆ. ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತು ರಾಜ್ಯ ತನಿಖಾ ಸಂಸ್ಥೆಯ ಜಂಟಿ ತಂಡವು ಎನ್ಕೌಂಟರ್ ನಡೆದ ಸ್ಥಳಕ್ಕೆ ಭೇಟಿ ನೀಡಿದೆ. ಎನ್ ಐ ಎ ಪ್ರಕರಣವನ್ನ ತನಿಖೆಗೆ ಒಳಪಡಿಸುವ ಸಾಧ್ಯತೆ ಇದೆ.








