ವಿಜಯಪುರ: ಕೊರೊನಾ ಬಗ್ಗೆ ಜನರು ಭಯಪಡುವುದು ಬೇಡ ಎಂದು ಸರ್ಕಾರ ಹಾಗೂ ವೈದ್ಯರು ಆಗಾಗ ಹೇಳುತ್ತಲೇ ಬಂದಿದ್ದಾರೆ. ಆದರೆ ಗುಮ್ಮಟ ನಗರಿ ವಿಜಯಪುರದಲ್ಲಿ ಕೊರೊನಾಗೆ ಹೆದರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ವಿಜಯಪುರದ ನಗರದ ಜೋರಾಪುರ ಪೇಟೆಯಲ್ಲಿ 57 ವರ್ಷದ ವ್ಯಕ್ತಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನಾರೋಗ್ಯದ ಕಾರಣದಿಂದ ಮೂರು ದಿನಗಳ ಹಿಂದೆ ವ್ಯಕ್ತಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆಗ ವೈದ್ಯರು ನಿಮ್ಮಲ್ಲಿ ಕೊರೊನಾ ಲಕ್ಷಣಗಳು ಕಂಡು ಬಂದಿವೆ. ಕೆಲ ಔಷಧಿ ನೀಡಿ ಕೋವಿಡ್ ಆಸ್ಪತ್ರೆಗೆ ತೆರಳುವಂತೆ ವೈದ್ಯರು ಸೂಚಿಸಿದ್ದರು. ಆದ್ರೆ ಆ ವ್ಯಕ್ತಿ ಕೊವಿಡ್ ಆಸ್ಪತ್ರೆಗೆ ತೆರಳುವ ಬದಲು ಮನೆಗೆ ಮರಳಿದ್ದಾರೆ.
ತನಗೆ ಕೊರೊನಾ ಬಂದಿದ್ದು ಬದುಕುವುದಿಲ್ಲ ಎಂದು ಭಾವಿಸಿಕೊಂಡ ವ್ಯಕ್ತಿ ಮನೆಯಲ್ಲಿ ಬೆಳಗಿನ ಜಾವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಾಂಧಿ ಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ತಾರಕಕ್ಕೇರಿದ ಕೈ ಕಮಲ ಯುದ್ಧ: ಬಿಜೆಪಿಯಲ್ಲಿ ಜೈಲು ಬೇಲು ಆದವರು ಬ್ಯಾಟಿಂಗ್ ಬೌಲಿಂಗ್ ಮಾಡ್ತಿಲ್ವಾ ಎಂದು ಕಾಂಗ್ರೆಸ್ ಘರ್ಜನೆ
ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದ ಹಿನ್ನೆಲೆಯಲ್ಲಿ ಬಿ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೂ ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಸಂಘರ್ಷ ಮಾತ್ರ...








