ಉತ್ತರ ಕನ್ನಡ: ಕಾರವಾರದಲ್ಲಿ ಮಾರುತಿ ನಾಯ್ಕ್ (Maruti Naik) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಅಮಾನತುಗೊಳಿಸಲಾಗಿದೆ ಎನ್ನಲಾಗಿದೆ.
ಕಾರವಾರ ಪೊಲೀಸ್ ಠಾಣಾ ಇನ್ಸ್ಪೆಕ್ಟರ್ ಕೆ.ಕುಸುಮಾಧರ, ಪಿಎಸ್ಐ ಶಾಂತಿನಾಥ ಮತ್ತು ಕಾನ್ಸ್ಟೇಬಲ್ ದೇವರಾಜ್ ಅವರನ್ನು ಅಮಾನತು ಮಾಡಿ ಎಸ್ಪಿ ವಿಷ್ಣುವರ್ಧನ್ ಆದೇಶ ಹೊರಡಿಸಿದ್ದಾರೆ.
ಹಿಂದೂ ಧರ್ಮದ ವಿರುದ್ಧ ದಲಿತ ಮುಖಂಡ ಎಲಿಷಾ ಹೇಳಿಕೆಯೊಂದನ್ನು ನೀಡಿದ್ದರು. ಈ ಕುರಿತು ವಿಡಿಯೋ ರೆಕಾರ್ಡ್ ಮಾಡಿದ್ದಕ್ಕೆ ಮಾರುತಿ ನಾಯ್ಕ್ ಮೇಲೆ ಹಲ್ಲೆ ನಡೆದಿತ್ತು. ಹೀಗಾಗಿ ದಲಿತ ಮುಖಂಡ ಎಲಿಷಾ ಎಲಕಪಾಟಿ ಕುಟುಂಬದ ವಿರುದ್ಧ ಆರೋಪ ಮಾಡಿ ಮಾರುತಿ ನಾಯ್ಕ್ ದೂರು ನೀಡಿದ್ದ. ಆದರೆ ಪೊಲೀಸರು ಆರೋಪಿ ಪರ ಕೆಲಸ ಮಾಡಿ, ಕಿರುಕುಳ ನೀಡಿದ್ದಾರೆ ಎಂಬ ಮಾತು ಕೇಳಿ ಬಂದಿತ್ತು. ಹೀಗಾಗಿ ಡೆತ್ನೋಟ್ ಬರೆದು ಮಾರುತಿ ನಾಯ್ಕ್ ಆತ್ಮಹತ್ಯೆ ಮಾಡಿಕೊಂಡಿದ್ದರು.