ಬೇರೊಬ್ಬನ ಜೊತೆಗೆ ಯುವತಿಗೆ ನಿಶ್ಚಿತಾರ್ಥ – ಪ್ರೇಮಿಗಳು ಆತ್ಮಹತ್ಯೆಗೆ ಶರಣು..!
ಹಾವೇರಿ : ಪರಸ್ಪರ ಪ್ರೀತಿಸುತ್ತಿದ್ದ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆಯೊಂದು ಹಾವೇರಿಯಲ್ಲಿ ನಡೆದಿದೆ. 22 ವರ್ಷದ ಯುವತಿ ವಿದ್ಯಾಶ್ರೀಗೆ ಬೇರೊಬ್ಬನ ಜೊತೆಗೆ ನಿಶ್ಚಿತಾರ್ಥ ನೆರವೇರಿತ್ತು.
ಇದರಿಂದ ಮನನೊಂದ ಯುವತಿ ಹಾಗೂ ಆಕೆಯ ಪ್ರಿಯಕರ 23 ವಷಧ ಇರ್ಷಾದ್ ಕುಡುಚಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಿನ್ನೆ ಬೆಳಗಿನ ಜಾವ ಮನೆಯಿಂದ ವಿದ್ಯಾಶ್ರೀ ನಾಪತ್ತೆಯಾಗಿದ್ದಾರೆ ಎಂದು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇಂದು ಇರ್ಷಾದ್ ಕುಟುಂಬಕ್ಕೆ ಸೇರಿದ ಜಮೀನಿನಲ್ಲೇ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ತಾಲೂಕಿನ ನಾಗನೂರು ಗ್ರಾಮದ ಬಳಿ ನಡೆದಿದೆ.








