ಕೌಟುಂಬಿಕ ಕಲಹದಿಂದ ಬೇಸತ್ತು ಇಬ್ಬರು ಮಕ್ಕಳಿಗೆ ನೇಣು ಬಿಗಿದು ತಾಯಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗದ ಚೋರಡಿಯಲ್ಲಿ ನಡೆದಿದೆ. 25 ವರ್ಷದ ಜ್ಯೋತಿ, 3 ವರ್ಷದ ಸಾನ್ವಿ 1 ವರ್ಷದ ಕುಶಾಲ್ ಮೃತ ದುರ್ದೈವಿಗಳಾಗಿದ್ದಾರೆ.
ಮೃತ ಮಹಿಳೆ ಜ್ಯೋತಿ ಹಾಗೂ ಶಿವಮೂರ್ತಿ ಎಂಬುವವರು 5 ವರ್ಷಗಳ ಹಿಂದೆ ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಹೆಣ್ಣುಮಕ್ಕಳು, ಒಂದು ಗಂಡು ಮಗು ಇತ್ತು. ಶಿವಮೂರ್ತಿ ಅರಣ್ಯ ಇಲಾಖೆಯಲ್ಲಿ ಗುತ್ತಿಗೆ ನೌಕರನಾಗಿ ಕೆಲಸ ಮಾಡುತ್ತಿದ್ದರು. ಇತ್ತೀಚೆಗೆ ಇವರ ನಡುವೆ ಕೆಲ ವಿಚಾರಗಳಿಂದ ಜಗಳ ನಡೆಯುತ್ತಿತ್ತು. ಇದೇ ಆತ್ಮಹತ್ಯೆಗೆ ಕಾರಣವಾಗಿರುವ ಶಂಕೆಯನ್ನ ಪೊಲೀಸರು ವ್ಯಕ್ತಪಡಿಸಿದ್ದಾರೆ.
ಮಕ್ಕಳೊಂದಿಗೆ ಮನೆಯಲ್ಲೇ ಇದ್ದ ಜ್ಯೋತಿ ಮಕ್ಕಳಿಗೆ ನೇಣು ಬಿಗಿದು ತಾನೂ ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನೆ ಕುರಿತು ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಪತಿ ಶಿವಮೂರ್ತಿಯನ್ನ ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ಧಾರೆ..








