ರಾಜಸ್ಥಾನದ ಕೋಟಾದಲ್ಲಿ ಮತ್ತೆ ಆತ್ಮಹತ್ಯೆಯ ಪ್ರಕರಣಗಳು ಕೇಳಿ ಬಂದಿವೆ.
ಎರಡು ಪ್ರತ್ಯೇಕ ಘಟನೆಗಳಲ್ಲಿ ನೀಟ್(NEET)ಗೆ ತಯಾರಿ ನಡೆಸುತ್ತಿದ್ದ ಇಬ್ಬರು ಅಭ್ಯರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸರ ಮಾಹಿತಿಯಂತೆ, ಆವಿಷ್ಕಾರ್ ಸಂಭಾಜಿ ಕಾಸ್ಲೆ (17) ಎಂಬ ವಿದ್ಯಾರ್ಥಿ ಜವಾಹರ್ ನಗರದಲ್ಲಿನ ಕೋಚಿಂಗ್ ಇನ್‌ಸ್ಟಿಟ್ಯೂಟ್ ಕಟ್ಟಡದ ಆರನೇ ಮಹಡಿಯಿಂದ ಜಿಗಿದಿದ್ದಾನೆ. ಕಾಸ್ಲೆ ಕೋಚಿಂಗ್ ಇನ್‌ಸ್ಟಿಟ್ಯೂಟ್‌ನ ಮೂರನೇ ಮಹಡಿಯಲ್ಲಿ ಕೆಲವು ನಿಮಿಷಗಳ ಹಿಂದೆ ಪರೀಕ್ಷೆಯನ್ನು ಬರೆದಿದ್ದ ಎಂದು ತಿಳಿದು ಬಂದಿದೆ.
ಕಾಸ್ಲೆ ಸಾವಿನ ನಾಲ್ಕು ಗಂಟೆಗಳ ನಂತರ, ನೀಟ್‌ಗೆ ತಯಾರಿ ನಡೆಸುತ್ತಿದ್ದ ಆದರ್ಶ್ ರಾಜ್ (18) ಕುನ್ಹಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ತನ್ನ ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಹೀಗಾಗಿ ಈ ಭಾಗದಲ್ಲಿ ಆತಂಕ ಮನೆ ಮಾಡುತ್ತಿದೆ.