ಕೌಟುಂಬಿಕ ಕಲಹ – ವಿಷ ಸೇವಿಸಿ ಆತ್ಮಹತ್ಯಗೆ ಶರಣಾದ ನವವಿವಾಹಿತ
ಚಿಂತಾಮಣಿ ತಾಲ್ಲೂಕಿನ ಕೋನಪ್ಪಲ್ಲಿ ಗ್ರಾಮದಲ್ಲಿ ಘಟನೆ
ನರೇಶ್ ಬಾಬು ಮೃತ ದುರ್ದೈವಿ
ಮೂರು ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ನರೇಶ್
ಚಿಕ್ಕಬಳ್ಳಾಪುರ : ಕೌಟುಂಬಿಕ ಕಲಹ ಹಿನ್ನೆಲೆ ನವವಿಹಾತ ವಿಷ ಸೇವಿಸಿ ಆತ್ಮಹತ್ಯಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಕೋನಪ್ಪಲ್ಲಿ ಗ್ರಾಮದಲ್ಲಿ ನಡೆದಿದೆ.. ನರೇಶ್ ಬಾಬು ಮೃತ ದುರ್ದೈವಿಯಾಗಿದ್ದು ಇವರು ಕೋನಪ್ಪಲ್ಲಿ ಗ್ರಾಮದ ನಿವಾಸಿ ಎನ್ನಲಾಗಿದೆ. ಇವರು ಮೂರು ತಿಂಗಳ ಹಿಂದಷ್ಟೇ ಚೈತ್ರ ಎಂಬುವರನ್ನು ವಿವಾಹವಾಗಿದ್ದರು ಎನ್ನಲಾಗಿದೆ.. ತಂದೆ ಆಂಜಿನೇಯರೆಡ್ಡಿ ಮತ್ತು ನರೇಶ್ ನಡುವೆ ದೊಡ್ಡ ಗಲಾಟೆ ನಡೆದಿದೆ..
ಆದ್ರೆ ನಿಖರ ಕಾರಣ ತಿಳಿದುಬಂದಿಲ್ಲ.. ಇದರಿಂದ ಮನನೊಂದ ನರೇಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.








