ಸುಳ್ಯ ಶಾಸಕ ಎಸ್.ಅಂಗಾರ ಅವರಿಗೆ ಕೊರೋನಾ ಸೋಂಕು
ಸುಳ್ಯ, ಅಗಸ್ಟ್28: ದಕ್ಷಿಣ ಕನ್ನಡದ ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕ ಎಸ್.ಅಂಗಾರ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
![]()
ಬೆಂಗಳೂರಿನಿಂದ ಆಗಮಿಸಿದ ಅಂಗಾರ ಅವರಿಗೆ ತಲೆನೋವು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಅವರು ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಕೋವಿಡ್-19 ಪರೀಕ್ಷೆಗೆ ಒಳಗಾಗಿದ್ದು, ಪರೀಕ್ಷಾ ವರದಿಯಲ್ಲಿ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಶಾಸಕರಿಗೆ ಕೊರೋನಾ ಸೋಂಕಿನ ಲಘವಾದ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹೋಮ್ ಕ್ವಾರಂಟೈನ್ ಗೆ ಒಳಗಾಗಿದ್ದಾರೆ ಎಂದು ವರದಿಯಾಗಿದೆ. ಶಾಸಕರ ಕಾರು ಚಾಲಕ ಮುರಳಿ ಭೀಮಾಜಿಗೋಡ್ಲು ಅವರಿಗೂ ಕೊರೋನಾ ಸೋಂಕು ದೃಢಪಟ್ಟಿದೆ.

ಈ ನಡುವೆ ಅಗಸ್ಟ್ 25ರಂದು ಸುಳ್ಯ ವಿಧಾನಸಭಾ ಕ್ಷೇತ್ರದ ಹಲವು ಕಡೆಯ ಅಭಿವೃದ್ಧಿ ಕಾಮಗಾರಿಗಳಿಗೆ ಅಂಗಾರರೊಂದಿಗೆ ರಾಜ್ಯ ಬಿಜೆಪಿ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಕೂಡ
ಭಾಗವಹಿಸಿದ್ದರು ಎಂದು ತಿಳಿದು ಬಂದಿದೆ.








