ಲೋಕಸಭೆ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಕಳೆದ ಬಾರಿ ಗೆಲುವು ಸಾಧಿಸಿದ್ದರು. ಆನಂತರ ಅವರು ಬಿಜೆಪಿ ಸೇರಿದ್ದರು. ಈಗ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು, ಇದು ಅವರಿಗೆ ಮುಳುವಾಗಿದೆ.
ಆದರೆ, ಈ ಬಾರಿಯೂ ಮಂಡ್ಯದಿಂದಲೇ ಸ್ಪರ್ಧೆ ಮಾಡುತ್ತೇನೆಂದು ಪಟ್ಟು ಹಿಡಿದಿರುವ ಸುಮಲತಾ ಅಂಬರೀಶ್ಗೆ ಹಿನ್ನಡೆಯಾಗುವ ಸಾಧ್ಯತೆ ಇದೆ. ಮಂಡ್ಯ ಟಿಕೆಟ್ ಜೆಡಿಎಸ್ ಪಾಲಾಗುವ ಸಾಧ್ಯತೆ ಇದೆ. ಇದರಿಂದ ಸಂಸದೆ ಸುಲಮತಾ ಅಂಬರೀಶ್ ನಡೆ ಮಾತ್ರ ನಿಗೂಢವಾಗಿದೆ.
ಸರ್ವೇಗಳು ಕೂಡ ಈ ಬಾರಿ ಬಿಜೆಪಿ ಹಾಗೂ ಜೆಡಿಎಸ್ ಗೆಲ್ಲುತ್ತದೆ ಎಂದು ಹೇಳಿವೆ.
ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಅವರು ಅಮಿತ್ ಶಾ ಭೇಟಿ ಮಾಡಿದ್ದು, ಹಾಸನ, ಮಂಡ್ಯ ಹಾಗೂ ಕೋಲಾರ ಕ್ಷೇತ್ರಗಳು ಬಹುತೇಕ ಜೆಡಿಎಸ್ ಪಾಲಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಇನ್ನು 2-3 ದಿನಗಳಲ್ಲಿ ಮೂರು ಕ್ಷೇತ್ರಗಳ ಅಭ್ಯರ್ಥಿ ಹೆಸರು ಘೋಷಿಸುವ ಸಾಧ್ಯತೆ ಇದೆ. ಹಾಸನದಿಂದ ಪ್ರಜ್ವಲ್ ರೇವಣ್ಣ, ಮಂಡ್ಯದಿಂದ ಸಿ.ಎಸ್ ಪುಟ್ಟರಾಜು, ಕೋಲಾರದಿಂದ ಸಮೃದ್ಧಿ ಮಂಜುನಾಥ್ ಅಥವಾ ಮಲ್ಲೇಶ್ಬಾಬು ಕಣಕ್ಕೆ ಇಳಿಯುವ ಸಾಧ್ಯತೆ ದೆ ಎನ್ನಲಾಗುತ್ತಿದೆ.