ಇಂದು ಆಗಸದಲ್ಲಿನ ವಿಸ್ಮಯಕಾರಿ ವಿದ್ಯಮಾನಕ್ಕೆ ಸಾಕ್ಷಿಯಾದ ಜನ..!
ಆಗಸದಲ್ಲಿನ ವಿಸ್ಮಯಕಾರಿ ವಿದ್ಯಮಾನವೊಂದಕ್ಕೆ ದೇಶ ಹಾಗೂ ರಾಜಧಾನಿ ಬೆಂಗಳೂರು ಜನ ಸಾಕ್ಷಿಯಾಗಿದ್ದಾರೆ.. ಹೌದು.. ಇಂದು ( ಸೋಮವಾರ ) ಬೆಳಿಗ್ಗೆ ಸರಿಯಾಗಿ 11 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಸೂರ್ಯನ ಸುತ್ತಲೂ ಉಂಗುರಾಕಾರದ ಆಕೃತಿ ಕಂಡುಬಂದಿತ್ತು..
ಈ ಅಪರೂಪವನ್ನ ಅನೇಕ ಜನರು ಕಣ್ತುಂಬಿಕೊಂಡಿದ್ದಾರೆ. ಬೆಳಿಗ್ಗೆ 11 ಗಂಟೆಯಿಂದ – ಮಧ್ಯಾಹ್ನ 12 ಗಂಟೆಯವರೆಗೂ ಈ ವಿಸ್ಮಯವನ್ನ ಜನ ಕಣ್ತುಂಬಿಕೊಂಡಿದ್ದಾರೆ. ಈ ದೃಶ್ಯದ ಫೋಟೋ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗ್ತಿದ್ದು, ಇಂತಹ ಅಪರೂಪದ ನೋಟ ಕಣ್ತುಂಬಿಕೊಳ್ಳಲು ಸಾಧ್ಯವಾಗದ ಅನೇಕರು ನಿರಾಸೆಗೊಂಡಿದ್ದಾರೆ. ಬೆಂಗಳೂರು ಸೇರಿದಂತೆ ಹಲವು ರಾಜ್ಯದಲ್ಲಿ ಇದು ಗೋಚರವಾಗಿದೆ.
ಇದು ವಾತಾವರಣದಲ್ಲಿ ತೇವಾಂಶ ಹೆಚ್ಚಿರುವ ಕಾರಣ ಮಳೆ ಬರುವ ಮುನ್ಸೂಚನೆಯನ್ನ ನೀಡುತ್ತದೆ. ಮಂಜುಗಡ್ಡೆ ಹರಳುಗಳು ಸೂರ್ಯನಿಗೆ 22 ಡಿಗ್ರಿ ಅಥವಾ ಹೆಚ್ಚಿನ ಕೋನದಲ್ಲಿ ವಕ್ರೀಭವನವಾಗಿ , ಸೂರ್ಯನ ಸುತ್ತಲೂ ವೃತ್ತಾಕಾರದಲ್ಲಿ ಉಂಗುರದ ರೀತಿ ಹರಡಿಕೊಳ್ಳುತ್ತದೆ.
ಈ ಹರಳುಗಳ ಮೂಲಕ ಸೂರ್ಯನ ಬೆಳಕು ಹಾದುಹೋಗುವ ಕಿರಣವು ಕಾಮನ ಬಿಲ್ಲಿನ 7 ಬಣ್ಣಗಳಾಗಿ ಚದುರಿ ಆಕರ್ಷವಾದ ಕಾಮನಬಿಲ್ಲು ಗೋಚರವಾಗುತ್ತದೆ. ಇನ್ನೂ ಬೇರೆ ಬೇರೆ ಜಾಗಗಳಲ್ಲಿ ಬೇರೆ ಬೇರೆ ಸಮಯಕ್ಕೆ ಇದು ಗೋಚರಿಸುವುದಾಗಿ ವಿಜ್ಞಾನಿಗಳು ತಿಳಿಸಿದ್ಧಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.