ರಾಜ್ಯದಲ್ಲಿ ವಿದ್ಯುತ್ ಕೊರತೆಯಾಗುತ್ತೆ ಅನ್ನೋದು ಊಹಾಪೋಹ : ಸುನೀಲ್ ಕುಮಾರ್ Sunil Kumar saaksha tv
ದಾವಣಗೆರೆ : ರಾಜ್ಯದಲ್ಲಿ ವಿದ್ಯುತ್ ಕೊರತೆಯಾಗುತ್ತೆ ಅನ್ನೋದು ಊಹಾಪೋಹ. ರಾಯಚೂರು-ಬಳ್ಳಾರಿ ಘಟಕದಲ್ಲಿ ವಿದ್ಯುತ್ ಉತ್ಪಾದನೆಗೆ ಯಾವುದೇ ತೊಂದರೆ ಇಲ್ಲ ಎಂದು ಇಂಧನ ಸಚಿವ ವಿ.ಸುನೀಲ್ ಕುಮಾರ್ ಹೇಳಿದ್ದಾರೆ.
ರಾಜ್ಯದಲ್ಲಿ ವಿದ್ಯುತ್ ಕೊರತೆಯಾಗಲಿದೆ ಎಂಬ ವಿಚಾರವಾಗಿ ದಾವಣಗೆರೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ವಿದ್ಯುತ್ ಮತ್ತು ಕಲ್ಲಿದ್ದಲು ಅಭಾವ ಉಂಟಾಗುವುದಿಲ್ಲ.
ರಾಜ್ಯದಲ್ಲಿ ವಿದ್ಯುತ್ ಅಭಾವ ಉಂಟಾಗದಂತೆ ಎಲ್ಲ ರೀತಿಯ ಎಚ್ಚರಿಕೆವಹಿಸಲಾಗಿದೆ. ಕೇಂದ್ರ ಸರ್ಕಾರ 8 ರೇಕ್ಸ್ ಕಲ್ಲಿದ್ದಲು ಕಳುಹಿಸಿ ಕೊಟ್ಟಿದೆ. ನವೆಂಬರ್ ಅಂತ್ಯದಲ್ಲಿ ಇನ್ನೆರಡು ರೇಕ್ಸ್ ಹೆಚ್ಚು ಮಾಡುವಂತೆ ಕೇಂದ್ರಕ್ಕೆ ಮನವಿ ಮಾಡಿದ್ದೇವೆ ಎಂದು ತಿಳಿಸಿದರು.
ಇದೇ ವೇಳೆ ಉಪಚುನಾವಣೆ ಬಗ್ಗೆ ಮಾತನಾಡಿದ ಸುನೀಲ್ ಕುಮಾರ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಉಪಚುನಾವಣೆ ಗೆಲ್ತೀವಿ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.









