ವಾಷಿಂಗ್ಟನ್: ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿರುವ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ (Sunita Williams) ಮತ್ತು ಬುಚ್ ವಿಲ್ಮೋರ್ ಅವರನ್ನು ಮರಳಿ ಕರೆ ತರುವುದಕ್ಕಾಗಿ ನಾಸಾ (NASA) ಹಾಗೂ ಸ್ಪೇಸ್ ಎಕ್ಸ್ (SpaceX ) ನಿರ್ಧರಿಸಿವೆ ಎನ್ನಲಾಗಿದೆ.
ಹಿಂದೆ ಸೆ.26 ರಂದು ಉಡಾವಣೆಗೆ ತಯಾರಿ ಮಾಡಿಕೊಳ್ಳಲಾಗಿತ್ತು. ಆದರೆ ಹೆಲೆನ್ ಚಂಡಮಾರುತದಿಂದ ಉಂಟಾದ ಪ್ರತಿಕೂಲ ಹವಾಮಾನದ ಕಾರಣ ಉಡಾವಣೆಯನ್ನು ಮುಂದೂಡಲಾಗಿತ್ತು. ಜೂನ್ ನಲ್ಲಿ 8 ದಿನಗಳ ಬಾಹ್ಯಾಕಾಶ ಯಾತ್ರೆ ತೆರಳಿದ್ದ ಇಬ್ಬರು ಗಗನಯಾತ್ರಿಗಳು ಬೋಯಿಂಗ್ ಸ್ಟಾರ್ ಲೈನರ್ ನಲ್ಲಿ ತಾಂತ್ರಿಕ ದೋಷದಿಂದಾಗಿ ಅಲ್ಲೇ ಸಿಲುಕಿದ್ದಾರೆ.