ಬೆಂಗಳೂರು: ದೇಶದಲ್ಲಿ ಕೊರೊನಾ ಸೋಂಕು ಹರಡುವಿಕೆಯನ್ನು ತಡೆಯುವ ನಿಟ್ಟಿನಲ್ಲಿ ನಿನ್ನೆ ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 22 ರಂದು ಜನತಾ ಕರ್ಫ್ಯೂ ಪಾಲಿಸುವಂತೆ ಮನವಿ ಮಾಡಿದ್ದಾರೆ. ಇದಕ್ಕೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಬೆಂಬಲ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ದೇವೇಗೌಡರು. ಕೊರೊನಾ ಮಹಾಮಾರಿಯನ್ನು ದೇಶದ ಪ್ರತಿಯೊಬ್ಬ ಪ್ರಜೆಯೂ ಸ್ವಯಂ ಸಂಕಲ್ಪ ಹಾಗೂ ಸಂಯಮದಿಂದ ಎದುರಿಸಬೇಕೆಂಬ ಪ್ರಧಾನಿಯವರ ಮಾತು ಪಾಲನಯೋಗ್ಯವಾಗಿದ್ದು, ಮಾರ್ಚ್ 22 ಭಾನುವಾರದಂದು ನರೇಂದ್ರ ಮೋದಿಯವರು ಕರೆ ನೀಡಿರುವ ಜನತಾ ಕರ್ಫ್ಯೂವನ್ನು ಬೆಂಬಲಿಸುವ ಮೂಲಕ ಸಾಮಾಜಿನ ಕರ್ತವ್ಯವನ್ನು ಪಾಲಿಸೋಣ ಎಂದು ರಾಜ್ಯದ ಜನರಲ್ಲಿ ಮನವಿ ಮಾಡಿದ್ದಾರೆ.








