ಮೇಘಾಲಯದಲ್ಲಿ ಹನಿಮೂನ್ ವೇಳೆ ಪತಿ ರಾಜಾ ರಘುವಂಶಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸೋನಂ ರಘುವಂಶಿಗೆ ನೀಡಲಾಗಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.
ನ್ಯಾಯಮೂರ್ತಿಗಳಾದ ಎಂ.ಎಂ. ಸುಂದ್ರೇಶ್ ಹಾಗೂ ಪಿ.ಬಿ. ವರಾಳೆ ಅವರಿದ್ದ ದ್ವಿಸದಸ್ಯ ಪೀಠ ಈ ಮಹತ್ವದ ಆದೇಶ ಹೊರಡಿಸಿದೆ.
ಪ್ರಕರಣದ ವಾಸ್ತವಾಂಶಗಳು, ಆರೋಪಗಳ ಗಂಭೀರತೆ ಹಾಗೂ ತನಿಖೆಯ ಸ್ವರೂಪವನ್ನು ಪರಿಗಣಿಸಿದ ನ್ಯಾಯಪೀಠ, ಆರೋಪಿ ಜಾಮೀನಿಗೆ ಅರ್ಹಳಲ್ಲ ಎಂದು ಸ್ಪಷ್ಟಪಡಿಸಿದೆ.
ಈ ಆದೇಶದೊಂದಿಗೆ ಸೋನಂ ರಘುವಂಶಿಗೆ ನೀಡಲಾಗಿದ್ದ ಜಾಮೀನು ರದ್ದಾಗಿದ್ದು, ಪ್ರಕರಣದ ಮುಂದಿನ ಕಾನೂನು ಪ್ರಕ್ರಿಯೆ ಮುಂದುವರಿಯಲಿದೆ.








