ಸ್ವಯಂಪ್ರೇರಿತವಾಗಿ ಲೈಂಗಿಕ ವೃತ್ತಿಯಲ್ಲಿ ತೊಡಗಿಸಿಕೊಳ್ಳುವ ವಯಸ್ಕ ಮಹಿಳೆಯರ ವಿರುದ್ಧ ದಾಳಿ ನಡೆಸುವುದು ಅಥವಾ ಕ್ರಿಮಿನಲ್ ಪ್ರಕರಣ ದಾಖಲಿಸುವುದು ಕಾನೂನುಬಾಹಿರ ಎಂದು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಸ್ವಯಂಪ್ರೇರಿತವಾಗಿ ಲೈಂಗಿಕ ವೃತ್ತಿಯಲ್ಲಿ ತೊಡಗಿಸಿಕೊಳ್ಳುವ ವಯಸ್ಕರನ್ನು ಅಪರಾಧಿಗಳಂತೆ ನೋಡಬಾರದು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
ಬದಲಾಗಿ, ಮಹಿಳೆಯರು ಹಾಗೂ ಅಪ್ರಾಪ್ತ ವಯಸ್ಕರ ಮಾನವ ಕಳ್ಳಸಾಗಣೆಯಲ್ಲಿ ತೊಡಗಿರುವ ಜಾಲಗಳು, ದಂಧೆಕೋರರು ಮತ್ತು ಮಾಫಿಯಾ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಗಳು ಹಾಗೂ ಪೊಲೀಸ್ ಇಲಾಖೆಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.
ಮಾನವ ಕಳ್ಳಸಾಗಣೆ ತಡೆಗಟ್ಟುವ ಉದ್ದೇಶದಿಂದ ಹೊರಡಿಸಿದ ಮಾರ್ಗಸೂಚಿಗಳಲ್ಲಿ, ಸೆಕ್ಸ್ ವರ್ಕರ್‌ಗಳಿಗೂ ಮಾನವೀಯ ಗೌರವ ಮತ್ತು ಸಂವಿಧಾನ ನೀಡಿರುವ ಹಕ್ಕುಗಳ ರಕ್ಷಣೆ ಅಗತ್ಯವೆಂದು ನ್ಯಾಯಾಲಯ ಒತ್ತಿಹೇಳಿದೆ. ಜೊತೆಗೆ, ರಕ್ಷಣೆ ಕಾರ್ಯಾಚರಣೆಗಳ ವೇಳೆ ಮಹಿಳೆಯರ ಗೌರವಕ್ಕೆ ಧಕ್ಕೆ ಉಂಟಾಗದಂತೆ ಪೊಲೀಸರು ನಡೆದುಕೊಳ್ಳಬೇಕೆಂದು ಸೂಚಿಸಲಾಗಿದೆ.








