ಚೆನ್ನೈ : ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶರಾದ ಎ.ಆರ್. ಲಕ್ಷ್ಮಣನ್ ಅವರು ಇಂದು ಹೃದಯಾಘಾತದಿಂದ ನಿಧರಾಗಿದ್ದಾರೆ. ಭಾರತದ ಕಾನೂನು ಆಯೋಗದ ಮಾಜಿ ಅಧ್ಯಕ್ಷರೂ ಆಗಿದ್ದ 78 ವರ್ಷದ ನ್ಯಾಯಮೂರ್ತಿ ಎ.ಆರ್. ಲಕ್ಷ್ಮಣನ್ ಅವರಿಗೆ ಬುಧವಾರ ಬೆಳಗ್ಗೆ 11 ಗಂಟೆಗೆ ಹೃದಯಾಘಾತವಾಗಿದ್ದು, ಕೂಡಲೇ ಕಾರೈಕುಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಗದೇ ಇಂದು ಕೊನೆಯುಸಿರೆಳೆದಿದ್ದಾರೆ. ![]()
ಇನ್ನೂ ವಿಪರ್ಯಾಸವೆಂದರೆ ಕೇವಲ 2 ದಿನಗಳ ಹಿಂದೆಯಷ್ಟೇ ಲಕ್ಷ್ಮಣನ್ ಅವರ ಪತ್ನಿ ಮೀನಾಕ್ಷಿಯವರು ಸಹ ವಿಧಿವಶರಾಗಿದ್ದರು.









