ಚೆನೈ, ಮೇ 17: ತಮಿಳುನಾಡಿನಲ್ಲಿ ಮದ್ಯದಂಗಡಿ ಮುಚ್ಚುವಂತೆ ಮದ್ರಾಸ್ ಹೈಕೋರ್ಟ್ ಆದೇಶ ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿತು.ಇದೀಗ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮದ್ಯದಂಗಡಿ ಮುಚ್ಚುವಂತೆ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ತಡೆಯಾಜ್ಞೆ ನೀಡಿದೆ.
ಇದರಿಂದಾಗಿ ತಮಿಳು ನಾಡು ಸರಕಾರಕ್ಕೆ ಮದ್ಯದಂಗಡಿ ತೆರೆಯಲು ಅನುಮತಿ ಸಿಕ್ಕಿದಂತಾಗಿದೆ.
ಮದ್ಯದಂಗಡಿಗಳಲ್ಲಿ ಮದ್ಯ ಮಾರಾಟ ಮಾಡುವಾಗ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಬಣ್ಣ ಮುದ್ರಿತ ಟೋಕನ್ ವಿತರಿಸುವ ವ್ಯವಸ್ಥೆ ಮಾಡಲಾಗಿದ್ದು, ಭಾನುವಾರದಿಂದ ಶನಿವಾರದ ವರೆಗೆ ಏಳು ದಿನ ಏಳು ಬಣ್ಣಗಳ ಟೋಕನ್ ನೀಡಲಾಗುವುದು. ಅದಕ್ಕೆ ಅನುಸಾರವಾಗಿ ಮದ್ಯ ಮಾರಾಟ ಮಾಡಲಾಗುತ್ತದೆ.
ಅಂದು ಅವಹೇಳನ ಇಂದು ಆಶ್ರಯ: ನಂದನ್ ನಿಲೇಕಣಿ ವಿಚಾರದಲ್ಲಿ ಪ್ರಧಾನಿ ಮೋದಿಯವರ ಅವಕಾಶವಾದಿ ರಾಜಕೀಯವನ್ನು ಪ್ರಶ್ನಿಸಿದ ಬಿ.ಕೆ.ಹರಿಪ್ರಸಾದ್
ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ನಾಯಕತ್ವದ ದ್ವಂದ್ವ ನಿಲುವನ್ನು ಕಾಂಗ್ರೆಸ್ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರು ತೀವ್ರವಾಗಿ ತರಾಟೆಗೆ...








