ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಎನ್.ವಿ. ರಮಣ ಪ್ರಮಾಣ ವಚನ ಸ್ವೀಕಾರ

1 min read

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಎನ್.ವಿ. ರಮಣ ಪ್ರಮಾಣ ವಚನ ಸ್ವೀಕಾರ

ನವದೆಹಲಿ : ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ಟೀಸ್ ಎನ್.ವಿ.ರಮಣ ರಾಷ್ಟ್ರಪತಿ ಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಭಾರತದ 48ನೇ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕರಿಸಿದರು. ಎನ್.ವಿ.ರಮಣ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರಮಾಣವಚನ ಬೋಧಿಸಿದರು.

ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ಎಸ್ ಎ ಬೊಬ್ಡೆ ಶುಕ್ರವಾರ ನಿವೃತ್ತಿಗೊಂಡ ಬಳಿಕ ಈ ಮಹತ್ವದ ಸ್ಥಾನವನ್ನು 63 ವರ್ಷದ ನ್ಯಾಯಮೂರ್ತಿ ಎನ್.ವಿ.ರಮಣ ತುಂಬಿದ್ದಾರೆ. ನ್ಯಾ. ರಮಣ ಅವರ ಸೇವಾವಧಿ 2022, ಆಗಸ್ಟ್ 26ರವರೆಗೂ ಇದೆ.

1957, ಆಗಸ್ಟ್ 27ರಂದು ಜನಿಸಿದ ನ್ಯಾ. ರಮಣ ಅವರು 2000ರ ಜೂನ್ನಲ್ಲಿ ಆಂಧ್ರ ಪ್ರದೇಶದ ಹೈಕೋರ್ಟ್ಗೆ ಖಾಯಂ ನ್ಯಾಯಾಧೀಶರಾಗಿ ನೇಮಕವಾಗಿದ್ದರು. ಅದಾದ ಬಳಿಕ ಅವರ ಅವರು ದೆಹಲಿ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದರು. ನಂತರ 2014, ಫೆಬ್ರವರಿಯಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಅವರನ್ನ ನೇಮಕ ಮಾಡಲಾಗಿತ್ತು.

ಚೀನಾದಲ್ಲಿ ಮುಸ್ಲಿಂ ಉಯಿಘರ್ ಮುಸ್ಲಿಮ್ ಮಹಿಳೆಯರಿಗೆ ಲೈಂಗಿಕ ಚಿತ್ರಹಿಂಸೆ – ಚೀನಾದ ಭಯನಾಕ ಸತ್ಯ ಬಯಲು..!

ಕೊರೊನಾ ಸ್ಫೋಟ : ಬೆಂಗಳೂರಲ್ಲಿ ಇಂದು 17,597 ಮಂದಿಗೆ ಸೋಂಕು

‘ದಕ್ಷಿಣ ಏಷ್ಯಾ ಅದ್ರಲ್ಲೂ ಭಾರತದಲ್ಲಿ ಅತ್ಯಾಚಾರ ಸಂತ್ರಸ್ತರಿಗೆ ಸರಿಯಾಗಿ ನ್ಯಾಯ ಸಿಗುತ್ತಿಲ್ಲ – ಕಠಿಣ ಕಾನೂನಿನ ಅಗತ್ಯವಿದೆ’…!

ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಶೀಲ್ಡ್ ನ ಪ್ರತಿ ಡೋಸ್ ಗೆ 600 ರೂ – ಇದು ಜಾಗತಿಕ ಮಾರುಕಟ್ಟೆಯಲ್ಲೇ ಅತ್ಯಧಿಕ !

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd