ವಿಶೇಷಚೇತನರಿಗೆ ಬಡ್ತಿಯಲ್ಲಿ ಮೀಸಲಾತಿ ನಿರಾಕರಿಸಲಾಗದು – ಸುಪ್ರೀಂ ಕೋರ್ಟ್
ಯಾವುದೋ ಕ್ರಿಯಾತ್ಮಕತೆ ಅಥವಾ ಇತರ ಕಾರಣಗಳನ್ನು ನೀಡಿ ವಿಶೇಷಚೇತನರಿಗೆ ಬಡ್ತಿಯಲ್ಲಿ ಮೀಸಲಾತಿ ನಿರಾಕರಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.
ಈ ಪರಿಸ್ಥಿತಿಯಲ್ಲಿ ಸರ್ಕಾರವು ಸಮಸ್ಯೆ ಪರಿಹರಿಸಲು ಮಾರ್ಗೋಪಾಯಗಳನ್ನು ಕಂಡುಕೊಳ್ಳಬೇಕು ಎಂದೂ ಹೇಳಿದೆ. ಇತರರಂತೆ ವಿಶೇಷಚೇತನರನ್ನೂ ಬಡ್ತಿಗೆ ಪರಿಗಣಿಸಬೇಕು. ಇಂತಹ ವ್ಯಕ್ತಿಗಳಿಗೆ ಅನುಗುಣವಾದ ಹುದ್ದೆಗಳನ್ನು ಸರ್ಕಾರ ಗುರುತಿಸಬೇಕು ಎಂದೂ ನ್ಯಾಯಪೀಠ ಹೇಳಿದೆ.
ವರನಿಗಾಗಿ ಜಾಹೀರಾತು… ವಧುವಿನ ಕಂಡೀಷನ್ ಕೇಳಿ ದಂಗಾದ ನೆಟ್ಟಿಗರು
ಮೀಸಲಾತಿ ನಿರಾಕರಿಸಿದರೆ ಇತರರು ಬಡ್ತಿ ಪಡೆದುಕೊಳ್ಳುವಾಗ ವಿಶೇಷಚೇತನರಲ್ಲಿ ಹತಾಶೆ ಉಂಟು ಮಾಡಬಹುದು ಎಂದು ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಅವರೊನ್ನೊಳಗೊಂಡ ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.