ರಾಜಕೀಯ ಪಕ್ಷಗಳಿಗೆ ಕ್ರಿಮಿನಲ್ ಹಿನ್ನೆಲೆಯವರ ಮಾಹಿತಿ ಕೊಡಿ ಎಂದು ಸುಪ್ರೀಂ ಕೋರ್ಟ್ ತಾಕೀತು ಮಾಡಿದೆ.
ಸಂಸತ್ತು ಮತ್ತು ವಿಧಾನಸಭಾ ಚುನಾವಣೆಗಳಲ್ಲಿ ಕ್ರಿಮಿನಲ್ ಹಿನ್ನೆಲೆ ಉಳ್ಳವರು ಆರಿಸಿ ಬರುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಅಂತಹವರಿಗೆ ನೀವು ಟಿಕೆಟ್ ನೀಡಿದ್ದೇಕೆ? ಈ ಕುರಿತು ಮಾಹಿತಿ ನೀಡಿ ಎಂದು ರಾಜಕೀಯ ಪಕ್ಷಗಳಿಗೆ ಆದೇಶಿಸಿದೆ.
ಚುನಾವಣೆಗೆ ಸ್ಪರ್ಧಿಸುವಾಗ ಅಭ್ಯರ್ಥಿಗಳು ಸಮಾಜಕ್ಕೆ ಮಾಡಿರುವ ಸಾಧನೆ ಮಾನದಂಡವಾಗಿರಬೇಕೆ ಹೊರತು ಅವರು ಗೆಲ್ಲುವ ಅಭ್ಯರ್ಥಿಯೇ? ಹಿಂದಿನ ಚುನಾವಣೆಯಲ್ಲಿ ಗೆದ್ದಿದ್ದಾರೆಯೇ? ಎಂಬ ಅಂಶಗಳು ಅಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ.
ಕ್ರಿಮಿನಲ್ ಕೇಸ್ ಇದ್ದು ಆಯ್ಕೆಯಾದ ಜನಪ್ರತಿನಿಧಿಗಳ ಮಾಹಿತಿಯನ್ನು 48ತಾಸುಗಳ ಒಳಗಾಗಿ ಪಕ್ಷದ ವೆಬ್‌ಸೈಟ್, ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಮತ್ತು ಪತ್ರಿಕೆಗಳಲ್ಲಿ ಪ್ರಕಟಿಸಬೇಕು. ಅಲ್ಲದೆ ಚುನಾವಣಾ ಆಯೋಗಕ್ಕೆ ಅಭ್ಯರ್ಥಿಗಳನ್ನು ಸ್ವರ್ಧೆಗೆ ಆಯ್ಕೆ ಮಾಡಿದ 72ಗಂಟೆಗಳ ಒಳಗಾಗಿ ವರದಿ ಸಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.
ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು
ರಾಜ್ಯದ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಆರೋಗ್ಯ ಇಲಾಖೆ ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗಿದೆ. ಶಾಲೆಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟಕ್ಕೆ ನಿರ್ಬಂಧ ಹೇರಿದ ಬಳಿಕ, ಇದೀಗ ರಾಜ್ಯದ...








