ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. ಅವರ ವಿರುದ್ಧ ಹೊರಡಿಸಲಾಗಿದ್ದ ಗಡಿಪಾರು ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಈ ಹಿಂದೆ, ಅಪರಾಧ ಹಿನ್ನೆಲೆ ಹಾಗೂ ನಿರಂತರವಾಗಿ ಸಮಾಜದ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡಿದ ಆರೋಪದ ಹಿನ್ನೆಲೆಯಲ್ಲಿ, ಪುತ್ತೂರು ಉಪ ವಿಭಾಗಾಧಿಕಾರಿಗಳು ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿಗೆ ಗಡಿಪಾರು ಮಾಡುವ ಆದೇಶ ಹೊರಡಿಸಿದ್ದರು.
ಈ ಆದೇಶವನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಗಡಿಪಾರು ಆದೇಶಕ್ಕೆ ಮಧ್ಯಂತರ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಪ್ರಕರಣದ ಮುಂದಿನ ವಿಚಾರಣೆ ಹಾಗೂ ಅಂತಿಮ ತೀರ್ಪು ನ್ಯಾಯಾಂಗ ಪ್ರಕ್ರಿಯೆಯಂತೆ ಮುಂದುವರಿಯಲಿದೆ.








