ಪಿಎಂ ಕೇರ್ ಫಂಡ್ ಅನ್ನು ಎನ್‌ಡಿಆರ್‌ಎಫ್ ಗೆ ವರ್ಗಾಯಿಸಲು ನಿರಾಕರಿಸಿದ ಸುಪ್ರೀಂ ಕೋರ್ಟ್
ಹೊಸದಿಲ್ಲಿ, ಅಗಸ್ಟ್ 18: ಪಿಎಂ ಕೇರ್ ಫಂಡ್‌ಗೆ ನೀಡಿರುವ ಹಣವನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಗೆ (ಎನ್ಡಿಆರ್ಎಫ್) ವರ್ಗಾಯಿಸಲು ನಿರ್ದೇಶಿಸುವಂತೆ ಕೋರಿ ಸ್ವಯಂ ಸೇವಾ ಸಂಸ್ಥೆಯೊಂದು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾ ಮಾಡಿದೆ.
ಕೋವಿಡ್ -19 ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ಪಿಎಂ ಕೇರ್ ಫಂಡ್‌ಗೆ ನೀಡಿದ ಹಣವನ್ನು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ನಿಧಿಗೆ (ಎನ್ಡಿಆರ್ಎಫ್) ವರ್ಗಾಯಿಸಲು ಕೇಂದ್ರಕ್ಕೆ ನಿರ್ದೇಶಿಸಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ.
ಕೋವಿಡ್ -19 ಸಾಂಕ್ರಾಮಿಕ ರೋಗಕ್ಕಾಗಿ ಪಿಎಂ ಕೇರ್ ಫಂಡ್ ಅಡಿಯಲ್ಲಿ ಸಂಗ್ರಹಿಸಿದ ಹಣವನ್ನು ಎನ್‌ಡಿಆರ್‌ಎಫ್‌ಗೆ ವರ್ಗಾಯಿಸಬೇಕು ಎಂದು ಕೋರಿ ಎನ್‌ಜಿಒ ‘ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯಡಿಯಲ್ಲಿ ಅರ್ಜಿ ಸಲ್ಲಿಸಿತ್ತು. ಕೋವಿಡ್ -19 ಸಾಂಕ್ರಾಮಿಕ ರೋಗವನ್ನು ಎದುರಿಸಲು ವಿಪತ್ತು ನಿರ್ವಹಣಾ ಕಾಯ್ದೆಯಡಿ ರಾಷ್ಟ್ರೀಯ ಯೋಜನೆಯನ್ನು ಸಿದ್ಧಪಡಿಸಲು, ತಿಳಿಸಲು ಮತ್ತು ಕಾರ್ಯಗತಗೊಳಿಸಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಅರ್ಜಿಯಲ್ಲಿ ಕೋರಿತ್ತು.
ನ್ಯಾಯಮೂರ್ತಿಗಳಾದ ಆರ್ ಎಸ್ ರೆಡ್ಡಿ ಮತ್ತು ಎಂ ಆರ್ ಷಾ ಅವರನ್ನೂ ಒಳಗೊಂಡ ನ್ಯಾಯಪೀಠ ತನ್ನ ತೀರ್ಪಿನಲ್ಲಿ ವಿಪತ್ತು ನಿರ್ವಹಣಾ ಕಾಯ್ದೆಯಡಿ ಸರ್ಕಾರ ಸಿದ್ಧಪಡಿಸಿದ ಯೋಜನೆ ಕೋವಿಡ್ -19 ಗೆ ಸಾಕಾಗುತ್ತದೆ ಎಂದು ಹೇಳಿದೆ