ಎನ್‌ಸಿಪಿ ನಾಯಕ ನವಾಬ್ ಮಲಿಕ್ ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಹಾರಾಷ್ಟ್ರ ಸಚಿವ ಮತ್ತು ಎನ್‌ಸಿಪಿ ನಾಯಕ ನವಾಬ್ ಮಲಿಕ್ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಮೂರ್ತಿಗಳಾದ ಡಿವೈ ಚಂದ್ರಚೂಡ್ ಮತ್ತು ಸೂರ್ಯಕಾಂತ್ ಅವರ ಪೀಠ, ತನಿಖೆಯು ಆರಂಭಿಕ ಹಂತದಲ್ಲಿದೆ ಎಂದು ಹೇಳಿದೆ.
ಮಾರ್ಚ್ 15 ರ ಬಾಂಬೆ ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ ಆದರೆ ಮಲಿಕ್ ಅವರು ವಿಚಾರಣಾ ನ್ಯಾಯಾಲಯದ ಮುಂದೆ ಕಾನೂನಿನ ಅಡಿಯಲ್ಲಿ ಲಭ್ಯವಿರುವ ಪರಿಹಾರವನ್ನು ಪಡೆಯಬಹುದು ಎಂದು ಹಿರಿಯ ವಕೀಲ ಕಪಿಲ್ ಸಿಬಲ್, ಮಲಿಕ್ ಪರ ವಾದ ಮಂಡಿಸಿದರು. 1999ರಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು 2022ರಲ್ಲಿ ಅವರನ್ನು ಬಂಧಿಸಿದೆ.
ಅಕ್ರಮ ಹಣ ವರ್ಗಾವಣೆ ಮತ್ತು ಭಯೋತ್ಪಾದನೆ ನಿಧಿ ಪ್ರಕರಣದಲ್ಲಿ ನವಾಬ್ ಮಲಿಕ್ ಅವರ ನ್ಯಾಯಾಂಗ ಬಂಧನವನ್ನು ಮುಂಬೈನ ವಿಶೇಷ ನ್ಯಾಯಾಲಯವು ಮೇ 6 ರವರೆಗೆ ವಿಸ್ತರಿಸಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣದಲ್ಲಿ ಫೆಬ್ರವರಿ 23 ರಂದು ಜಾರಿ ನಿರ್ದೇಶನಾಲಯ ಮಲಿಕ್ ಅವರನ್ನು ಬಂಧಿಸಿತ್ತು.
ಮಲಿಕ್ ಅವರ ಹಿಂದಿನ ಜೈಲು ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಧೀಶ ಆರ್.ಎನ್.ರೋಕಡೆ ಅವರ ಮುಂದೆ ನಿನ್ನೆ ಹಾಜರುಪಡಿಸಲಾಯಿತು. ಈ ಪ್ರಕರಣದಲ್ಲಿ ಮಲಿಕ್ ವಿರುದ್ಧ ಇಡಿ ಗುರುವಾರ ಚಾರ್ಜ್ ಶೀಟ್ ಸಲ್ಲಿಸಿದೆ.