ಹೊಸದಿಲ್ಲಿ, ಮೇ 15 : ಸುಪ್ರೀಂ ಕೋರ್ಟ್ ವಕೀಲರಿಗೆ ಮತ್ತು ನ್ಯಾಯಮೂರ್ತಿಗಳಿಗೆ ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಶೀಘ್ರವೇ ವಸ್ತ್ರ ಸಂಹಿತೆ ನೀತಿ ರೂಪಿಸುವುದು ಎಂದು ಮುಖ್ಯ ನ್ಯಾಯ ಮೂರ್ತಿ ಎಸ್.ಎ.ಬೋಬ್ಡೆ ತಿಳಿಸಿದ್ದಾರೆ.
ಪ್ರಕರಣವೊಂದರ ವಿಚಾರಣೆ ವೇಳೆ ವಕೀಲ ಕಪಿಲ್ ಸಿಬಲ್ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ, ನ್ಯಾಯಮೂರ್ತಿಗಳಾದ ಮಲ್ಹೋತ್ರಾ, ಹೃಷಿಕೇಶ್ ರಾಯ್ ನೇತೃತ್ವದ ಪೀಠದ ಮುಂದೆ ‘ ಈ ಪೀಠದಲ್ಲಿ ನ್ಯಾಯಮೂರ್ತಿಗಳ ನಿಲುವಂಗಿ ಇಲ್ಲ’ ವೆಂದು ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯ ಮೂರ್ತಿ ಎಸ್.ಎ.ಬೋಬ್ಡೆ ‘ಗೌನ್ ನಿಂದ ಸೋಂಕು ಹರಡುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ವಕೀಲರು, ಜಡ್ಜ್ ಗಳು ನಿಲುವಂಗಿ ಧರಿಸದಂತೆ ಶೀಘ್ರದಲ್ಲಿ ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಹೇಳಿದರು.
ಮೇ 17 ರ ಬಳಿಕ ನ್ಯಾಯಾಲಯದ ಕಾರ್ಯ ಚಟುವಟಿಕೆಗಳು ಶುರುವಾಗಲಿದ್ದು, ಸುಪ್ರೀಂ ಕೋರ್ಟ್ ತನ್ನ ಏಳು ವಾರಗಳ ಬೇಸಿಗೆ ರಜೆಯನ್ನು ಕಡಿತಗೊಳಿಸಿದೆ
8 ವರ್ಷಗಳ ಮೌನ ಮುರಿದ ನ್ಯಾಷನಲ್ ಕ್ರಶ್: ಕುಟುಂಬದ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಟ್ರೋಲಿಗರಿಗೆ 24 ಗಂಟೆಗಳ ಖಡಕ್ ವಾರ್ನಿಂಗ್ ನೀಡಿದ ರಶ್ಮಿಕಾ ಮಂದಣ್ಣ
ಸದಾ ನಗುಮುಖದಿಂದಲೇ ಎಲ್ಲರ ಮನಸ್ಸು ಗೆದ್ದಿರುವ ರಶ್ಮಿಕಾ ಮಂದಣ್ಣ ಇದೀಗ ತೀವ್ರವಾಗಿ ಗರಂ ಆಗಿದ್ದಾರೆ. ಸಿನಿಮಾ ರಂಗಕ್ಕೆ ಕಾಲಿಟ್ಟಾಗಿನಿಂದಲೂ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಟ್ರೋಲ್, ನೆಗೆಟಿವ್ ಕಮೆಂಟ್...








