ನವದೆಹಲಿ: ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರಕ್ಕೆ ಸಂಕಷ್ಟ ಎದುರಾಗಿದೆ. ನಾಳೆ ಸಂಜೆ 5 ಗಂಟೆಯೊಳಗೆ ಬಹುಮತ ಸಾಬೀತುಪಡಿಸಬೇಕೆಂದು ಸುಪ್ರೀಂ ಕೋರ್ಟ್ ಕಮಲ್ ನಾಥ್ ಸರ್ಕಾರಕ್ಕೆ ಆದೇಶಿಸಿದೆ.
ಸರ್ಕಾರದ ಅನಿಶ್ಚಿತತೆ ಹಿನ್ನೆಲೆಯಲ್ಲಿ ಬಹುಮತ ಸಾಬೀತುಪಡಿಸುವಂತೆ ಬಿಜೆಪಿ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಈ ಹಿನ್ನಲೆಯಲ್ಲಿ ಇಂದು ಈ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ ನ ದ್ವಿಸದಸ್ಯಪೀಠ ನಾಳೆ ಸಂಜೆಯೊಳಗೆ ವಿಶ್ವಾಸಮತ ಯಾಚನೆ ನಡೆಸುವಂತೆ ಸೂಚಿಸಿದೆ.
ಇನ್ನು ಮಧ್ಯಪ್ರದೇಶ ಸರ್ಕಾರದಲ್ಲಿ ಕಳೆದ ಕೆಲ ದಿನಗಳಿಂದ ರಾಜಕೀಯ ಬಿಕ್ಕಟ್ಟು ಉಂಟಾಗಿದ್ದು, ಸಚಿವರು ಸೇರಿದಂತೆ 19 ಶಾಸಕರು ರಾಜೀನಾಮೆ ನೀಡಿದ್ದಾರೆ. ಇವರನ್ನು ಮನವೊಲಿಸಲು ಮಧ್ಯಪ್ರದೇಶದ ಕಾಂಗ್ರೆಸ್ ನಾಯಕರು ಪ್ರಯತ್ನಿಸುತ್ತಿದ್ದಾರೆ.