“ಸುಧಾಕರ್ ಶಾಸಕರ ಶೀಲ ಪರೀಕ್ಷೆ ಮಾಡಲಿ”
ತುಮಕೂರು : ಸಚಿವ ಡಾ.ಕೆ.ಸುಧಾಕರ್ ಅವರು ಆರೋಗ್ಯ ಮಂತ್ರಿ,ಹಾಗಾಗಿ ಶೀಲ ಪರೀಕ್ಷೆ ಮಾಡುವಂತೆ ಸಿಎಂಗೆ ಪತ್ರ ಬರೆಯಲಿ ಎಂದು ಮಾಜಿ ಶಾಸಕ ಸುರೇಶ್ ಗೌಡ ಹೇಳಿದ್ದಾರೆ.
224 ಶಾಸಕರ ಬಗ್ಗೆ ತನಿಖೆಯಾಗಲಿ ಎಂಬ ಸುಧಾಕರ್ ಅವರ ಹೇಳಿಕೆ ಬಗ್ಗೆ ಬಿಜೆಪಿ ಮಾಜಿ ಶಾಸಕ ಸುರೇಶ್ ಗೌಡ ಪ್ರತಿಕ್ರಿಯೆ ನೀಡಿದ್ದು, 224 ಜನ ಶಾಸಕರನ್ನ ತನಿಖೆ ಮಾಡಬೇಕು ಎಂದು ಸಚಿವ ಸುಧಾಕರ್ ಸಿಎಂಗೆ ಪತ್ರ ಬರೆಯಲಿ. ಅವರು ಆರೋಗ್ಯ ಮಂತ್ರಿ, ಹಾಗಾಗಿ ಶೀಲ ಪರೀಕ್ಷೆ ಮಾಡುವಂತೆ ಸಿಎಂಗೆ ಪತ್ರ ಬರೆಯಲಿ. ಮನುಷ್ಯನ ದೇಹದ ಅಂಗಾಂಗಗಳ ಬಗ್ಗೆ ಆರೋಗ್ಯ ಸಚಿವರಿಗೆ ಅರಿವಿದೆ. ಅವು ಹೇಗೆ ಕೆಲಸ ಮಾಡುತ್ತವೆ ಅನ್ನೋದು ಅವರಿಗೆ ತಿಳಿದಿದೆ. ಹಾಗಾಗಿ ಅವರೇ ಮುಖ್ಯಮಂತ್ರಿಗೆ ಹೇಳಿ ಪರೀಕ್ಷೆ ಮಾಡಿಸಲಿ ಎಂದು ಹೇಳಿದ್ದಾರೆ.