ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ : ಕಾಂಗ್ರೆಸ್ ಗೆ ಸುರೇಶ್ ಗೌಡ..? Suresh Gowda
ತುಮಕೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದ ತುಮಕೂರು ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ಗೌಡ, ದಿಢೀರ್ ಅಂತ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಈ ಮಧ್ಯೆ ಸುರೇಶ್ ಗೌಡ ಅವರು ಕಾಂಗ್ರೆಸ್ ಪಕ್ಷ ಸೇರುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.
ಯಾಕಂದರೇ ಇತ್ತಿಚೆಗೆ ತುಮಕೂರಿನ ಬಿಜೆಪಿಯಲ್ಲಿ ಸಚಿವ ಮಾಧುಸ್ವಾಮಿ ಪ್ರಭಾವ ಹೆಚ್ಚಳವಾಗಿದ್ದು, ಸುರೇಶ್ ಗೌಡ ಮಾಧುಸ್ವಾಮಿ ವಿರುದ್ಧ ಅಸಮಾಧಾನಗೊಂಡಿದ್ದರು.
ಹೀಗಾಗಿ ಕಾಂಗ್ರೆಸ್ ಸೇರಲು ಸುರೇಶ್ ಗೌಡ ಅವರು ತೆರೆ ಮರೆಯ ಕಸರತ್ತು ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಜಿಲ್ಲೆಯ ಒಕ್ಕಲಿಗ ರಾಜಕೀಯ ನಾಯಕರಾದ ಜೆಡಿಎಸ್ ಶಾಸಕ ಎಸ್.ಆರ್.ಶ್ರೀನಿವಾಸ್, ಪರಿಷತ್ ಸದಸ್ಯ ಬೆಮೆಲ್ ಕಾಂತರಾಜು ಬಳಿಕ ಸುರೇಶ್ ಗೌಡ ಕಾಂಗ್ರೆಸ್ ಗೆ ಸೇರುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.









